ಜಿಲ್ಲೆಗಳು

ಸೇತುವೆ ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಪ್ರತಿಭಟನೆ

ಹನೂರು: ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ ವಿಲೇಜ್ ಉಡುತೊರೆ ಹಳ್ಳಕ್ಕೆ ನಿರ್ಮಾಣ ಮಾಡಿರುವ ಸೇತುವೆಯನ್ನು ದುರಸ್ತಿ ಪಡಿಸುವಂತೆ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಜರುಗಿದೆ.

ಅಂತರರಾಜ್ಯ ಕೊಳ್ಳೇಗಾಲದಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದಲ್ಲಿರುವ ಜಿ ವಿಲೇಜ್ ಸೇತುವೆ ದುರಸ್ತಿಗೊಂಡು ವರ್ಷವೇ ಕಳೆದರೂ ಸಹ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ ದಿಡೀರ್ ಪ್ರತಿಭಟನೆ ನಡೆಸಿದರು.

ಕಳೆದ ತಿಂಗಳು ಬಿಆರ್ ಟಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆ ಸುಮಾರು ಹದಿನೈದು ದಿನಗಳ ಕಾಲ ಹಳ್ಳ ಉಕ್ಕಿ ಹರಿದ ಪರಿಣಾಮ ರಸ್ತೆಯ ಬಲಬದಿಯಲ್ಲಿ ಸೇತುವೆ ಕುಸಿದಿತ್ತು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತಾತ್ಕಾಲಿಕವಾಗಿ ಕಲ್ಲು ಮುಚ್ಚಿ ಕಾಂಕ್ರೀಟ್ ಹಾಕಿದ್ದರು. ಬುಧವಾರ ರಸ್ತೆಯ ಎಡಬದಿಯಲ್ಲಿ ಸೇತುವೆ ಕುಸಿದ ಪರಿಣಾಮ ವಾಹನ ಸಂಚಾರಕ್ಕೆ ತೊಡಕಾಗಿದೆ. ಆದ್ದರಿಂದ ಹೊಸ ಮೇಲ್ಸೇತುವೆಯನ್ನು ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮುಳುಗು ಸೇತುವೆಗಳನ್ನು ಮೇಲ್ದರ್ಜೆಗೇರಿಸುವಂತೆ ಹಲವಾರು ಬಾರಿ ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಪರಿವರ್ತನ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಎ ಇ ಇ ಲೋಕೋಪಯೋಗಿ ಇಲಾಖೆ ಕೊಳ್ಳೆಗಾಲ ಉಪವಿಭಾಗದ ಅಧಿಕಾರಿ ರಾಜೇಶ್ ಮುನ್ಸಿ ಅವರು ಜೀ ವಿಲೇಜ್ ಸಮೀಪ ಸೇತುವೆ ಕುಸಿದಿರುವುದು ಗಮನಕ್ಕೆ ಬಂದಿದೆ ಈಗಾಗಲೇ ಮೇಲ್ಸೇತುವೆ ನಿರ್ಮಾಣ ಮಾಡಲು ಇಲಾಖೆಗೆ ಪತ್ರ ಬರೆಯಲಾಗಿದೆ. ತಾತ್ಕಾಲಿಕವಾಗಿ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

andolanait

Recent Posts

ಅಜ್ಜೀಪುರದಿಂದ ಬೆಂಗಳೂರಿಗೆ ಪಾದಯಾತ್ರೆ: ಸಿದ್ದರಾಮಯ್ಯಗೆ ಮನವಿ ಸಲ್ಲಿಸಿ ಪ್ರತಿಭಟನೆ ಕೈಬಿಟ್ಟ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯಕ್ಕೆ ಕಾವೇರಿ ನದಿಯಿಂದ ಏತ ನೀರಾವರಿ…

5 mins ago

ಅದ್ದೂರಿಯಾಗಿ ಜರುಗಿದ ಬೂದಬಾಳು ವೆಂಕಟರಮಣಸ್ವಾಮಿ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ ಪಡೆದ ಬೂದುಬಾಳು ಪುಣ್ಯ…

16 mins ago

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: 10 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ…

2 hours ago

ಯುದ್ಧಕ್ಕೆ ನಾವು ಸದಾ ಸಿದ್ಧ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌…

2 hours ago

ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿ..!

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…

3 hours ago

ಇಂದು ರಕ್ತ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…

3 hours ago