ಜಿಲ್ಲೆಗಳು

ಈ ಮದುವೆಗೆ ಎತ್ತುಗಳೇ ಸೆಲೆಬ್ರಿಟಿ!

ಚಾಮರಾಜನಗರ: ಮದುವೆ ಅಂದ್ರೆ ವರನಿಗೆ ಐಷಾರಾಮಿ ಕಾರು, ಬೈಕ್ ತಂದು ನಿಲ್ಲಿಸುವುದು ಸಾಮಾನ್ಯ. ‌ಆದರೆ, ಇಲ್ಲೋರ್ವ ಯುವ ರೈತ ತನ್ನ ನೆಚ್ಚಿನ ಜೋಡೆತ್ತುಗಳಿಗೆ ವಿಶೇಷ ವೇದಿಕೆ ನಿರ್ಮಿಸಿ ತನ್ನ ಮದುವೆಯನ್ನು ವಿಶಿಷ್ಟವಾಗಿ ನೆರವೇರಿಸಿಕೊಂಡಿದ್ದಾರೆ.

ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ‌ ಗ್ರಾಮದಲ್ಲಿ ಇಂದು ವಿಶೇಷ ಮದುವೆಯೊಂದು ನಡೆದಿದ್ದು, ಕೃಷಿ ಚಟುವಟಿಕೆಗೆ ನೆರವಾಗುವ ತಮ್ಮ ಎತ್ತುಗಳನ್ನು ಮದುವೆ ಛತ್ರಕ್ಕೆ ಕರೆತಂದು ಅದಕ್ಕಾಗಿಯೇ ವೇದಿಕೆ ನಿರ್ಮಿಸಿ ಗೋಪ್ರೀತಿ ತೋರುವ ಮೂಲಕ ಮದುವೆ ಸಂಭ್ರಮವನ್ನು ಹೆಚ್ಚಿಸಿದ್ದಾರೆ.ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದ ಮಹೇಶ್ ಅವರೊಟ್ಟಿಗೆ ತೊರವಳ್ಳಿ ಗ್ರಾಮದ ಯೋಗಿತಾ ಸಪ್ತಪದಿ ತುಳಿದಿದ್ದಾರೆ. ಮದುವೆ ಸಮಾರಂಭಕ್ಕೆ ತಾವು ಸಾಕಿದ ಎತ್ತುಗಳನ್ನು ಕರೆತಂದು ಅವುಗಳು ಕೂಡ ವಿವಾಹಕ್ಕೆ ಸಾಕ್ಷೀಕರಿಸಬೇಕು ಎಂಬ ವರನ ಆಸೆಯನ್ನು ಇಲ್ಲ ಎನ್ನದ ಕುಟುಂಬಸ್ಥರು ಎತ್ತುಗಳನ್ನು ಸಿಂಗರಿಸಿ- ಅದಕ್ಕಾಗಿ ವೇದಿಕೆಯನ್ನು ನಿರ್ಮಿಸಿ ವಧು – ವರರಿಗೆ ಜೋಡೆತ್ತುಗಳಿಂದ ಆಶೀರ್ವಾದವನ್ನು ಕೊಡಿಸಿ ವಿಶೇಷವಾಗಿ ಮದುವೆ ನಡೆಸಿದ್ದಾರೆ.

andolanait

Recent Posts

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

1 hour ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

5 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

5 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

5 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

5 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

5 hours ago