ಮೈಸೂರು ವಿಶ್ವ ವಿಖ್ಯಾತ ಮೈಸೂರು ದಸರಾ 2022ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು.
ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದ ಅವರು ನಂತರ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಜನತೆಯ ಕುರಿತು ಕನ್ನಡದಲ್ಲಿಯೇ ಮಾತು ಆರಂಭಿಸಿದರು.
ಚಾಮುಂಡೇಶ್ವರಿಗೆ ನನ್ನ ಮನಃ ಪೂರ್ವಕ ನಮಸ್ಕಾರಗಳು. ಎಲ್ಲ ಸಹೋದರ ಸಹೋದರಿಯರಿಗೆ ನನ್ನ ಹೃದಯಪೂರ್ವಕ ನಮಸ್ಕಾರಗಳು ಎಂದು ಸರ್ವರಿಗೂ ವಂದಿಸುವ ಮಾತನಾಡಿ ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್, ರಾಜ್ಯಪಾಲರು ಸೇರಿದಂತೆ ಹಲವರಿಗೆ ನಮಸ್ಕಾರ ತಿಳಿಸುವ ಮೂಲಕ ಮಾತು ಆರಂಭಿಸಿದರು.





