ಜಿಲ್ಲೆಗಳು

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಅಕ್ರಮ-ಸಕ್ರಮ ಸಮಿತಿ ಸಭೆ

೧೧೨ ಜನರಿಗೆ ಸಾಗುವಳಿ ಮಂಜೂರು

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ದೊಡ್ಡಮಾರಗೌಡನಹಳ್ಳಿ -೧೬, ಕಮರಹಳ್ಳಿ-೨, ಕರಕರನಹಳ್ಳಿ ೫ ಜನ, ಯಚಲಹಳ್ಳಿ ೮ ಜನ, ಬೊಮ್ಮೇನಹಳ್ಳಿ ೧೯ ಜನ, ನಾಗವಾಲ ೧೬ ಜನ, ಚಿಕ್ಕನಹಳ್ಳಿ ೨೭ ಜನ, ರಟ್ನಹಳ್ಳಿ ೬ ಜನ, ದಡದಹಳ್ಳಿ ೩ ಜನ, ಎಸ್.ಹೆಮ್ಮನಹಳ್ಳಿ ೧ ಜನ, ಗುಂಗ್ರಾಲ್‌ಛತ್ರ ೪ ಜನ, ಕಲೂರು ನಾಗನಹಳ್ಳಿ ೦೫ ಜನರಿಗೆ ಒಟ್ಟು ೧೧೨ ಜನರಿಗೆ ಸಾಗುವಳಿಯನ್ನು ಇಂದು ನಡೆದ ಅಕ್ರಮ-ಸಕ್ರಮ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಅಕ್ರಮ-ಸಕ್ರಮ ಸಮಿತಿ ಸಭೆಯಲ್ಲಿ ನಮೂನೆ-೫೩ ಮತ್ತು ನಮೂನೆ-೫೭ ರಲ್ಲಿ ಒಟ್ಟು ೧೬೯೨ ಅರ್ಜಿಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ ೪೦೨ ಅರ್ಜಿಗಳು ಮೈಸೂರು ನಗರದಿಂದ ೧೦ ಕಿ.ಮೀ.ವ್ಯಾಪ್ತಿಯೊಳಗೆ ಬರುವುದರಿಂದ ತಿರಸ್ಕರಿಸಿದ್ದು, ಉಳಿಕೆ ೧೧೭೮ ಅರ್ಜಿಗಳ ಪೈಕಿ ೯೧೭ ಅರ್ಜಿಗಳು ಸ್ವೀಕೃತವಾಗಿದ್ದು, ಸದರಿ ಅರ್ಜಿಗಳು ಗೋಮಾಳ, ಹಿಡುವಳಿ, ಕೆರೆ/ಕಟ್ಟೆ ಜಮೀನುಗಳಿಗೆ ಸಂಬoಧಪಟ್ಟವರಿoದ. ೨೬೧ ಅರ್ಜಿಗಳು ವರದಿಗಾಗಿ ಬಾಕಿ ಇರುತ್ತವೆ ಎಂದು ತಿಳಿಸಿದ್ದಾರೆ.
ಚಿಕ್ಕನಹಳ್ಳಿ, ಮಾವಿನಹಳ್ಳಿ, ಗುಮ್ಮಚನಹಳ್ಳಿ, ಮದ್ದೂರು, ಅರಸನಕೆರೆ ಗ್ರಾಮಗಳಿಗೆ ಸಂಬoಧಿಸಿದoತೆ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸರ್ವೆ ಮಾಡಬೇಕಾಗಿರುವುದರಿಂದ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸರ್ವೆ ಮಾಡಿ ವರದರಿಯನ್ನು ಡಿಸೆಂಬರ್ ತಿಂಗಳೊಳಗೆ ನೀಡಲು ಸೂಚಿಸಲಾಯಿತು.
ಸಭೆಯಲ್ಲಿ ತಹಶೀಲ್ದಾರ್ ಗಿರೀಶ್, ಸದಸ್ಯರುಗಳಾದ ಹೂಟಗಳ್ಳಿ ರವಿ, ಪ್ರಮೀಳಾ ನಾಯಕ್, ಜೆ.ಪಿ.ರತ್ನಮ್ಮ, ಎ.ಡಿ.ಎಲ್.ಆರ್. ವಿವೇಕ್, ಆರ್.ಎಫ್.ಓ. ಸುರೇಂದ್ರ, ಉಪತಶೀಲ್ದಾರ್‌ಗಳಾದ ನಿಂಗಪ್ಪ, ಕುಬೇರ, ಲೋಕೇಶ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

andolanait

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

3 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

3 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

3 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

4 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

4 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

5 hours ago