ಆಷಾಢ ಆರಂಭಕ್ಕೂ ಮುನ್ನ ಚಾಮುಂಡಿ ಬೆಟ್ಟದಲ್ಲಿ ಟಫ್ ರೂಲ್ಸ್ ಜಾರಿ

ಮೈಸೂರು : ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ಬೆಟ್ಟಕ್ಕೆ ದರ್ಶನಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮೈಸೂರು ಜಿಲ್ಲಾಡಳಿತ ದರ್ಶನಕ್ಕೆ ಬರುವವರಿಗೆ ಜಾರಿ ಮಾಡಲು ಮುಂದಾಗಿದೆ.

ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಸಾರ್ವಜನಿಕರ ಹಿತದೃಷ್ಟಿಯಿಂದಾಗಿ ಜುಲೈ 1 ರಿಂದ ಚಾಮುಂಡಿಬೆಟ್ಟಕ್ಕೆ ಬರುವವರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು ಮತ್ತು ಲಸಿಕೆ ಹಾಕಿಸಿ ಕೊಳ್ಳದಿದ್ದಲ್ಲಿ ದರ್ಶನಕ್ಕೆ ಬರುವ 72 ಗಂಟೆಗಳ ಮುಂಚಿತವಾಗಿ ಕೋವಿಡ್ ಟೆಸ್ಟ್ ಮಾಡಿಸಿರಬೇಕು. ಎಂಬಿತ್ಯಾದಿ ರೂಲ್ಸ್ ಗಳನ್ನು ಸೂಚಿಲಾಗಿದ್ದು. ಈ ಸಂಬಂಧವಾಗಿ ಅಂತಿಮವಾದ ನಿರ್ಧಾರಗಳನ್ನು ಜೂನ್ 25ಕ್ಕೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.