ಜಿಲ್ಲೆಗಳು

ಚಂದ್ರಗ್ರಹಣ: ಚಾಮುಂಡಿಬೆಟ್ಟ ಸೇರಿ ಹಲವು ದೇಗುಲಗಳಲ್ಲಿ ದರ್ಶನ ಸಮಯ ಬದಲು

ಮೈಸೂರು: ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ನವೆಂಬರ್ 8, 2022 ರಂದು ಸಂಭವಿಸಲಿದೆ. ಚಂದ್ರಗ್ರಹಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಪೂಜಾ, ದರ್ಶನ ಸಮಯ ಹಾಗೂ ಭೋಜನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳು ಈ ಬಗ್ಗೆ ಪ್ರಕಟಣೆ ಹೊರಡಿಸಿವೆ.

ಗ್ರಹಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ
ನವೆಂಬರ್ 8ರ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಮಧ್ಯಾಹ್ನ1 ಗಂಟೆಯಿಂದ ಚಾಮುಂಡೇಶ್ವರಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ದೇಗುಲದ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಂದ್ರಗ್ರಹಣದ ಸ್ಪರ್ಶ ಕಾಲ ಹಾಗೂ ಮೋಕ್ಷ ಕಾಲಗಳಲ್ಲಿ ವಿಶೇಷ ಪೂಜೆಗಳು ನಡೆಯಲಿದ್ದು, ಚಂದ್ರಗ್ರಹಣದ ನಂತರ ದೇವಾಲಯದ ಗರ್ಭ ಗುಡಿಯ ಸ್ವಚ್ಛತೆ ನಡೆಯಲಿದೆ. ಈ ಬಳಿಕ ಗ್ರಹಣದ ನಂತರ ಅಭಿಷೇಕ ಮತ್ತು ಮಹಾ ಮಂಗಳಾರತಿ ನಡೆಯಲಿದ್ದು, ಈ ಸಮಯದಲ್ಲಿ ಭಕ್ತರ ಭೇಟಿಯನ್ನು ನಿರ್ಬಂಧಿಸಲಾಗಿದೆ.
ಆದರೆ ಚಂದ್ರಗ್ರಹಣದ ವೇಳೆ ಮಲೆಮಹದೇಶ್ಚರ ಬೆಟ್ಟದಲ್ಲಿ ದೇಗುಲ ಬಂದ್ ಮಾಡುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಭಕ್ತರಿಗೆ ಎಂದಿನಂತೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಎಂದಿನಂತೆ ಪ್ರಸಾದ ವ್ಯವಸ್ಥೆಯು ಇರಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಧರ್ಮಸ್ಥಳ
ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಆಗಲಿದೆ. ಮಧ್ಯಾಹ್ನ 1:30ರಿಂದ ರಾತ್ರಿ 7ರತನಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 1:30ರ ವರೆಗೆ ಮಾತ್ರ ಭೋಜನ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7 ಗಂಟೆಯ ನಂತರ ಭೋಜನ ವ್ಯವಸ್ಥೆ ಮುಂದುವರಿಯಲಿದೆ ಎಂದು ದೇವಸ್ಥಾನ ಪ್ರಕಟಣೆ ತಿಳಿಸಿದೆ.

ಕುಕ್ಕೆಯಲ್ಲಿ ದೇವರ ಸೇವೆಗಿಲ್ಲ ಅವಕಾಶ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 8ರಂದು ಯಾವುದೇ ಪೂಜಾ ಕಾರ್ಯಕ್ರಮ ನೆರವೇರುವುದಿಲ್ಲ. ಅಲ್ಲದೇ ಭೋಜನ ಪ್ರಸಾದ ವಿತರಣೆ ಕೂಡ ಇರುವುದಿಲ್ಲ. ಬೆಳಗ್ಗೆ 9 ರಿಂದ 11:30ರವರೆಗೆ ಭಕ್ತರಿಗೆ ದೇವರ ದರ್ಶನ ಅವಕಾಶವನ್ನು ಕಲ್ಪಿಸಲಾಗಿದೆ. ಮಧ್ನಾಹ್ನ 2:39ರಿಂದ ಸಂಜೆ 6:19 ರ ತನಕ ಮತ್ತು ರಾತ್ರಿ 7:30 ರಿಂದ 9 ರತನಕ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಧ್ಯಕಾಲ ಸಂಜೆ 4:29ಕ್ಕೆ ಗ್ರಹಣದ ವಿಶೇಷ ಪೂಜೆ
ಇನ್ನು ಕಟೀಲು ದೇವಸ್ಥಾನದಲ್ಲೂ ಗ್ರಹಣದ ದಿನ ದೇವರ ಪೂಜೆಯ ಸಮಯ ಬದಲಾವಣೆ ಆಗಲಿದೆ. ನವೆಂಬರ್ 8ರಂದು ಬೆಳಗ್ಗೆ 9:30ಕ್ಕೆ ದೇವರಿಗೆ ಪೂಜೆ ನಡೆಯುತ್ತದೆ. ಮಧ್ಯಾಹ್ನ ಭೋಜನ ಇರುವುದಿಲ್ಲ. ಬೆಳಗ್ಗೆ 11:30ರ ತನಕ ಮಾತ್ರ ಫಲಾಹಾರ ಇರುತ್ತದೆ. ರಾತ್ರಿ 8 ಗಂಟೆಗೆ ಪೂಜೆಗಳು ನಡೆಯಲಿದ್ದು, ಭೋಜನವೂ ಇರುತ್ತದೆ. ಗ್ರಹಣ ಕಾಲದಲ್ಲಿ ದೇಗುಲ ತೆರೆದಿರುತ್ತದೆ. ಗ್ರಹಣ ಮಧ್ಯ ಕಾಲದವರೆಗೆ ದೇವರಿಗೆ ಅಭಿಷೇಕ ಮಾಡಲಾಗುತ್ತದೆ. ಮಧ್ಯಕಾಲ ಸಂಜೆ 4:29ಕ್ಕೆ ಗ್ರಹಣದ ವಿಶೇಷ ಪೂಜೆ ಇದೆ ಎಂದು ದೇವಸ್ಥಾನದ ಆಡಳಿತ ತಿಳಿಸಿದೆ.

ಬೆಂಗಳೂರಿನಲ್ಲಿ ಗ್ರಹಣ ದರ್ಶನ ಯಾವಾಗ..?
ಈ ಬಾರಿಯ ಚಂದ್ರಗ್ರಹಣವನ್ನು ವೀಕ್ಷಿಸಲು ಯಾವುದೇ ವಿಶೇಷ ಸಲಕರಣೆಗಳ ಅಗತ್ಯವಿಲ್ಲ. ದೂರದರ್ಶಕವು ನೋಟ ಮತ್ತು ಕೆಂಪು ಬಣ್ಣವನ್ನು ಹೆಚ್ಚಿಸುತ್ತದೆ. ಬೆಂಗಳೂರಿನಲ್ಲಿ ಸಂಜೆ 5:57ಕ್ಕೆ ಚಂದ್ರಗ್ರಹಣ ಗೋಚರಿಸಲಿದೆ.

andolanait

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

11 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

11 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

11 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

12 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

12 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

12 hours ago