ಚಾಮರಾಜನಗರ: ಭಾನುವಾರ ರಾತ್ರಿ ಸುರಿದ ನಿರಂತರ ಮಳೆಗೆ ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ರಾಡಿಯಾಗಿದ್ದು, ಸಿಂಥೆಟಿಕ್ ಟ್ರ್ಯಾಕ್ಗೆ ಹೋಗುವ ದಾರಿ ಕೆಸರುಮಯವಾಗಿದೆ. ಇದರಿಂದ ಕೋಪಗೊಂಡಿರುವ 50 ಕ್ಕೂ ಹೆಚ್ಚು ಕ್ರೀಡಾಭ್ಯಾಸಿಗಳು ಸಿಂಥೆಟಿಕ್ ಟ್ರ್ಯಾಕ್ ಸಮೀಪ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ
ಕಳೆದ ಮೂರು ನಾಲ್ಕು ವರ್ಷದಿಂದಲೂ ಸಿಂಥಟಿಕ್ ಟ್ರ್ಯಾಕ್ ಸಮೀಪ ರಸ್ತೆ ನಿರ್ಮಿಸಿ, ಕ್ರೀಡಾಂಗಣದಲ್ಲಿ ನೀರು ನಿಂತು ಕೆಸರಾಗುವುದನ್ನು ತಪ್ಪಿಸಿ ಎಂದು ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗದೇ ಇಂದು ಕ್ರೀಡಾಂಗಣಕ್ಕೆ ತೆರಳಲು ಕ್ರೀಡಾಭ್ಯಾಸಿಗಳು ಪರದಾಡಿದ್ದಾರೆ. ವಿಪರ್ಯಾಸವೆಂದರೆ ಕಳೆದ 20 ವರ್ಷಗಳಿಂದಲೂ ಈ ಕ್ರೀಡಾಂಗಣದ ಕಾಮಗಾರಿ ನಡೆಯುತ್ತಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಅದೂ ಕೂಡ ಅವೈಜ್ಞಾನಿಕವಾಗಿದೆ ಎನ್ನುತ್ತಾರೆ ಸ್ಥಳೀಯರು
ಸಿಂಥೆಟಿಕ್ ಟ್ರ್ಯಾಕ್ನಲ್ಲಿ ಬರಿಗಾಲಲ್ಲೇ ನಡೆಯಬಾರದು ಎನ್ನುತ್ತಾರೆ. ಅದರಲ್ಲಿ ಕೆಸರು, ಮಣ್ಣು ತುಂಬಿ ಕಾಲು ಹಾಕಲು ಸಾಧ್ಯವಿಲ್ಲದಂತಾಗಿದೆ. ಕ್ರೀಡಾಂಗಣದಲ್ಲಿ ಕನಿಷ್ಠ ಸೌಲಭ್ಯ ಕಲ್ಪಿಸಲು ಕ್ರೀಡಾ ಇಲಾಖೆ ವಿಫಲವಾಗಿದೆ. ಮಿನಿ ಒಲಿಂಪಿಕ್ನಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಪದಕ ಪಡೆದಿದ್ದಾರೆ. ಸೌಲಭ್ಯವೇ ಕೊಡದಿದ್ದರೆ ಮಕ್ಕಳು ಹೇಗೆ ಆಟ ಆಡುತ್ತಾರೆ, ಪದಕ ಗೆಲ್ಲುತ್ತಾರೆ ಎಂದು ಕ್ರೀಡಾಭ್ಯಾಸಿಗಳ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…
ನ್ಯೂ ಇಯರ್ ಸೆಲಬ್ರೇಷನ್‌ಗೆ ದಿನಗಣನೆ ಬೆಂಗಳೂರು: 2024ನ್ನು ಮುಗಿಸಿ 2025ನ್ನು ಬರಮಾಡಿಕೊಳ್ಳಲು ಸಿಲಿಕಾನ್ ಸಿಟಿಯೇ ತುದಿಗಾಲಲ್ಲಿ ಕಾತರದಿಂದ ಕಾಯುತ್ತಿದೆ. ಸದ್ಯ…