ಮಂಡ್ಯ: ಮಳವಳ್ಳಿಯಲ್ಲಿ ಇತ್ತೀಚೆಗೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿಯ ಕುಟುಂಬದವರಿಗೆ ರೂ. 10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಶ್ರೀ ಮಲೆಮಹದೇಶ್ವರ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಳವಳ್ಳಿ ಘಟನೆ ಬಗ್ಗೆ ಎಲ್ಲರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಎಂದಿಗೂ ಇಂಥದ್ದು ನಡೆಯಬಾರದು. ಅತ್ಯಂತ ಅಮಾನುಷ ಕೃತ್ಯವಿದು. ಮನುಷ್ಯತ್ವವಿಲ್ಲದವರು ಮಾತ್ರ ಇಂಥ ಕೆಲಸ ಮಾಡಲು ಸಾಧ್ಯ . ಇದನ್ನು ಶಬ್ದಗಳಲ್ಲಿ ಖಂಡಿಸಲಾಗದು. ಅರಿಯದ ಕಂದಮ್ಮನ ಪರಿಸ್ಥಿತಿ ಕೇಳಿದರೆ ಕರುಳು ಕಿವುಚಿ ಬರುತ್ತದೆ. ಈಗಾಗಲೇ ಅಧಿಕಾರಿಗಳು ಕ್ರಮ ತೆಗೆದುಕೊಂಡು ಅಪರಾಧಿಯನ್ನು ಬಂಧಿಸಿದ್ದಾರೆ. ಎಲ್ಲ 302, 307, ಪೋಕ್ಸೋ ಸೆಕ್ಷನ್ ಗಳನ್ನು ಹಾಕಿದ್ದಾರೆ. ನಮ್ಮ ಪೊಲೀಸ್ ಮಹಾನಿರ್ದೇಶಕರಿಗೆ ಅಂದೇ ಸೂಚನೆ ನೀಡಿ ಕೂಡಲೇ ತನಿಖೆಯಾಗಿ ತಪ್ಪಿ ತಸ್ಥರನ್ನು ಶಿಕ್ಷೆಗೊಳಪಡಿಸಬೇಕೆಂದು ಸೂಚಿಸಿದ್ದೆ. ಅವರು ಎಫ್.ಎಸ್.ಎಲ್ ವರದಿ ಒಂದು ವಾರದಲ್ಲಿಯೇ ನೀಡಲಾಗುವುದೆಂದು ಹೇಳಿದ್ದು, ಬಂದ ಕೂಡಲೇ ಆರೋಪ ಪಟ್ಟಿ ಸಿದ್ಧಪಡಿಸಿ ಪೋಕ್ಸೋ ನ್ಯಾಯಾಲಯಕ್ಕೆ ಕಳುಹಿಸಿ, ಆದಷ್ಟು ಬೇಗ ನ್ಯಾಯ ನೀಡಲು ಕ್ರಮ ಕೈಗೊಂಡು ಇನ್ನೊಮ್ಮೆ ಹೀಗಾದರೆ ಅತಿ ಕಡಿಮೆ ಸಮಯದಲ್ಲಿ ಉಗ್ರ ಶಿಕ್ಷೆ ಈ ವ್ಯವಸ್ಥೆ ನೀಡಲಿದೆ ಎಂಬ ಸಂದೇಶವನ್ನು ಸಾರಲಾಗುವುದೆಂದು ಈ ಪ್ರಕರಣದಲ್ಲಿ ಸಾಬೀತು ಮಾಡುತ್ತೇವೆ ಎಂದರು.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…