ಚಾಮರಾಜನಗರ : ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲೂರಿನಲ್ಲಿ ಜ.6 ರಿಂದ 10 ರವರೆಗೆ ನಡೆಯಲಿರುವ ಜಾತ್ರೆ ಸಂದರ್ಭದಲ್ಲಿ ಪ್ರಾಣಿ, ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪ್ರಾಣಿಬಲಿ ನಿಷೇಧ ಕಾಯ್ದೆ 1959 ಮತ್ತು ನಿಯಮಗಳು 1963 ಅನ್ವಯ ದೇವಸ್ಥಾನಗಳಲ್ಲಿ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದು ಕಾನೂನಿಗೆ ವಿರುದ್ಧವಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ 1973 ರ ಸಿ.ಆರ್.ಪಿ.ಸಿ.111(1)(3) ಅಡಿಯಲ್ಲಿ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.





