ಮೈಸೂರಿನ ಮೃಗಾಲುಂಕ್ಕೆ ಭೇಟಿ ನೀಡಿದ ಮಕ್ಕಳು ಪ್ರಾಣಿ, ಪಕ್ಷಿಗಳನ್ನು ವೀಕ್ಷಿಸಿ ಸಂತಸಪಟ್ಟರು.
ಮೈಸೂರು: ನಗರದ ಅರಮನೆ, ಮೃಗಾಲಯ, ವಸ್ತು ಪ್ರದರ್ಶನದ ಆವರಣ ಮುಂತಾದ ಪ್ರೇಕ್ಷಣಿಯ ಸ್ಥಳಗಳಲ್ಲಿ ಸೋಮವಾರ ಮಕ್ಕಳದ್ದೇ ಕಾರುಬಾರು.
ಮಕ್ಕಳ ದಿನಾಚರಣೆ ಅಂಗವಾಗಿ ನಗರದ ವಿವಿಧ ಶಾಲೆಗಳ ಮಕ್ಕಳು ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸಂಭ್ರಮಿಸಿದರು. ಇದರ ಜೊತೆಗೆ ನಗರದ ವಿವಿಧ ಸಂಘ, ಸಂಸ್ಥೆಗಳು, ಶಾಲೆಗಳು ಮಕ್ಕಳ ದಿನಾಚರಣೆಯನ್ನು ಆಚರಿಸಿದವು.
ಮಕ್ಕಳ ದಿನಾಚರಣೆ ಅಂಗವಾಗಿ ನಗರದ ವಸ್ತು ಪ್ರದರ್ಶನ ಹಾಗೂ ಮೃಗಾಲಯಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿತ್ತು. ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದ ಮಕ್ಕಳಿಗೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ ಅವರು ಐಸ್ ಕ್ರೀಮ್, ಚಾಕೊಲೇಟ್, ತಂಪು ಪಾನೀಯ, ಮಜ್ಜಿಗೆ ವಿತರಿಸಿ, ಮಕ್ಕಳಿಗೆ ಗುಲಾಬಿ ಹಾಗೂ ಪೆನ್ ನೀಡಿ ಶುಭಕೋರಿದರು. ವ್ಯವಸ್ಥಾಪಕ ಸಿದ್ದೇಗೌಡ, ಎಇ ನಾಗೇಂದ್ರ, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಮೃಗಾಲಯದಲ್ಲಿ ಚಿಣ್ಣರು: ೧೪ ವರ್ಷದ ಒಳಗಿನ ಮಕ್ಕಳಿಗೆ ಸೋಮವಾರ ಮೃಗಾಲಯಕ್ಕೆ ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ೯ ಗಂಟೆಯಿಂದಲೇ ನೂರಾರು ಮಕ್ಕಳು ಮೃಗಾಲಯಕ್ಕೆ ಭೇಟಿ ನೀಡಿ ಪ್ರಾಣಿ, ಪಕ್ಷಿಗಳನ್ನು ವೀಕ್ಷಿಸಿ ಸಂತಸಪಟ್ಟರು.
ಕಾರ್ಯಕ್ರಮ ಉದ್ಘಾಟಿಸಿದ ಸಮರ್ಥನಂ ಸಂಸ್ಥೆುಂ ಹಿತೈಷಿ ಸೀತಾಲಕ್ಷ್ಮೀ ವಾತನಾಡಿ, ಮಕ್ಕಳು ನಾಳಿನ ಪ್ರಜೆಗಳು. ಹಾಗಾಗಿ ನಮ್ಮ ದೇಶದ ಾಂವುದೇ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ವಾಡಬಾರದು ಎಂದು ನೆಹರೂ ಸದಾ ಹೇಳುತ್ತಿದ್ದರು. ಇಂದು ನಾವು ಮಕ್ಕಳಿಗೆ ಒಳ್ಳೆುಂ ಭವಿಷ್ಯವನ್ನು ರೂಪಿಸಿ ಕೊಟ್ಟರೆ ಮುಂದೆ ಅವರು ನಮ್ಮ ರಾಷ್ಟ್ರಕ್ಕೆ ಭದ್ರ ಬುನಾದಿ ಆಗಲಿದ್ದಾರೆ ಎಂದರು.
ಸಮರ್ಥನಂ ಸಂಸ್ಥೆಯ ಶಿವರಾಜು, ನರಸಿಂಹಮೂರ್ತಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಭ್ರಮಾರಂಭ, ವಿಶೇಷ ಶಿಕ್ಷಕಿಯರಾದ ಪಿ.ಪದ್ಮ, ಎಚ್.ವಿದ್ಯಾವತಿ ಸಿಬ್ಬಂದಿಗಳಾದ ರಾಘವೇಂದ್ರ, ಪವಿತ್ರ ಮತ್ತಿತರರು ಹಾಜರಿದ್ದರು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…