ಯಳಂದೂರು: ತಾಲ್ಲೂಕಿನ ಪುರಾಣಿಪೋಡಿನ ಗಿರಿಜನ ಆಶ್ರಮ ಶಾಲೆಯ ಬಳಿ ಕಾಣಿಸಿಕೊಂಡಿದ್ದ ಮರಿಯಾನೆಗೆ ಕೊನೆಗೂ ತಾಯಿ ಸಿಗಲಿಲ್ಲ. ಆದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮೈಸೂರಿನ ಕೂರ್ಗಳ್ಳಿ ಬಳಿಯ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಮರಿಯಾನೆಯನ್ನು ರವಾನಿಸಿದ್ದಾರೆ.
ತಾಯಿಯಿಂದ ಬೇರ್ಪಟ್ಟಿದ್ದ ಗಂಡು ಮರಿಯಾನೆ ಭಾನುವಾರ ಪುರಾಣಿ ಪೋಡಿನ ಗಿರಿಜನ ಆಶ್ರಮ ಶಾಲೆಯ
ಆವರಣದಲ್ಲಿ ಕಾಣಿಸಿಕೊಂಡಿತ್ತು. ಮಕ್ಕಳು, ಗಿರಿಜನರ ಜೊತೆ ಆಟವಾಡಿದ್ದ ಈ ಮರಿಯಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದರು.
ಅರಣ್ಯ ಸಿಬ್ಬಂದಿ ಮರಿಯಾನೆಯ ತಾಯಿಗಾಗಿ ಶೋಧ ನಡೆಸಿದ್ದರು. ಮಂಗಳವಾರದ ತನಕವೂ ಇದರ ತಾಯಿ ಪತ್ತೆಯಾಗದ ಹಿನ್ನೆಲೆಯಲ್ಲಿ ಇದನ್ನು ಮೈಸೂರಿಗೆ ರವಾನಿಸಲಾಗಿದೆ ಎಂದು ಆರ್‌ಎಫ್‌ಒ ಲೊಕೇಶ್ ಮೂರ್ತಿ ಮಾಹಿತಿ ನೀಡಿದ್ದಾರೆ. ಯಳಂದೂರು ತಾಲ್ಲೂಕಿನ ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆ ಇದಾಗಿದೆ.
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…