ಮೈಸೂರು: ಪೋಕ್ಸೋ ಕಾಯಿದೆಯಡಿ ಬಂಧನದಲ್ಲಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಿದ ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರಿನಲ್ಲಿದ್ದ ಇವರನ್ನು ಪೊಲೀಸರು ವಿಚಾರಣೆಗಾಗಿ ಶುಕ್ರವಾರ ನಸುಕಿನಲ್ಲಿ ಚಿತ್ರದುರ್ಗಕ್ಕೆ ಕರೆದೊಯ್ದರು. ಮಹಿಳಾ ಪೊಲೀಸರು ಇವರನ್ನು ಇಡೀ ದಿನ ವಿಚಾರಣೆ ನಡೆಸಿದ್ದಾರೆ. ಶರಣರ ವಿರುದ್ಧ ಹೇಳಿಕೆ ನೀಡುವಂತೆ ಮಠದಲ್ಲಿ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡಿದ್ದ ತನ್ನ ಪುತ್ರಿಯರಿಗೆ ಕುಮ್ಮಕ್ಕು ನೀಡಿದ ಆರೋಪ ಈ ಮಹಿಳೆಯ ಮೇಲಿದೆ.
ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ನೀಡಿದ ದೂರು ಆಧರಿಸಿ ಮಠದ ವಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಎಂಬವರನ್ನು ಬಂಧಿಸಿದ್ದ ಪೊಲೀಸರು, ಶುಕ್ರವಾರ ಚಿತ್ರದುರ್ಗದಲ್ಲಿ ಪ್ರತ್ಯೇಕವಾಗಿ ವಿಚಾರಣೆ ನಡೆಸಿದರು. ಬಸವರಾಜನ್ ಪತ್ನಿ ಸೌಭಾಗ್ಯ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಸ್ಥಳ ಮಹಜರು: ಶಿವಮೂರ್ತಿ ಶರಣರ ಫೋಟೊಗಳು ಕಳವಾಗಿರುವ ಚಿತ್ರದುರ್ಗ ಮಠದ ರಾಜಾಂಗಣದ ಸ್ಥಳ ಮಹಜರು ಶುಕ್ರವಾರ ನಡೆಯಿತು. ಪೊಲೀಸ್ ವಶದಲ್ಲಿರುವ ಆರೋಪಿ ಶ್ರೀನಿವಾಸ್ ಎಂಬುವರನ್ನು ಮಠಕ್ಕೆ ಕರೆದೊಯ್ದು ತನಿಖಾ ತಂಡ ಸ್ಥಳ ಮಹಜರು ಮಾಡಿತು.
ಜಾಮೀನು ಅರ್ಜಿ ವಜಾ: ಎರಡನೇ ಪೋಕ್ಸೊ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಇಬ್ಬರು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ. ಆರೋಪಿಗಳಾದ ಮಹಾಲಿಂಗ ಮತ್ತು ಕರಿಬಸಪ್ಪ ಎಂಬುವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.
ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…
ಮುಂಬೈ : ಐಪಿಎಲ್ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…
ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…