ಜಿಲ್ಲೆಗಳು

ಎರಡು ವರ್ಷಗಳ ನಂತರ ಚುಂಚನಕಟ್ಟೆ ಜಲಪಾತೋತ್ಸವ

ನಾಳೆ ಸಂಜೆ ೬ ಗಂಟೆಗೆ ಸಚಿವ ಎಸ್‌ಟಿಎಸ್‌ರಿಂದ ಉದ್ಘಾಟನೆ; ಜಲಪಾತಕ್ಕೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರ

ಭೇರ್ಯ ಮಹೇಶ್

 ಕೆ.ಆರ್.ನಗರ: ಮೈಸೂರು ಜಿಲ್ಲೆಯ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಪ್ರವಾಸಿ ತಾಣವಾದ ಚುಂಚನಕಟ್ಟೆಯಲ್ಲಿ ಕಾವೇರಿ ನದಿಯ ಜಲಪಾತೋತ್ಸವ ಭಾನುವಾರ (ನ.೧೩) ಸಂಜೆ ೬ ಗಂಟೆಗೆ ನಡೆಯಲಿದೆ.

ಕಾವೇರಿ ನದಿಯ ಧನುಷ್ಕೋಟಿ ಜಲಪಾತೋತ್ಸವಕ್ಕೆ ಲೇಸರ್ ಲೈಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಜಲಪಾತ ಲೇಸರ್ ಬೆಳಕಿನಲ್ಲಿ ಜಗಮಗಿಸುತ್ತಿದ್ದು, ನೋಡುಗರ ಕಣ್ಮನ ಸೆಳೆುುಂವಂತೆ ಸಾಲಿಗ್ರಾಮ ತಾಲ್ಲೂಕು ಆಡಳಿತ ಸಕಲ ವ್ಯವಸ್ಥೆಯನ್ನು ಕಲ್ಪಿಸಿದೆ.

ಚುಂಚನಕಟ್ಟೆಯ ಕಾವೇರಿ ಜಲಪಾತೋತ್ಸವ ಹಿನ್ನೆಲೆಯಲ್ಲಿ ಶ್ರೀರಾಮನ ದೇವಾಲಯ, ಬಸವ ವೃತ್ತ, ಕಾವೇರಿ ನದಿಯ ಸೇತುವೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು ವಿಭಿನ್ನ ರೀತಿುಂಲ್ಲಿ ವಿದ್ಯುತ್ ಬೆಳೆಕಿನ ಸೊಬಗು ಕಾರ್ಯಕ್ರಮಕ್ಕೆ ಆಗಮಿಸುವವರಲ್ಲಿ ಉಲ್ಲಾಸ ತರಿಸುವುದು ಖಚಿತ.

ಶ್ರೀರಾಮನ ದೇವಸ್ಥಾನದ ಹಿಂಭಾಗದಲ್ಲಿ ಬೃಹತ್ ವೇದಿಕೆುಂನ್ನು ನಿರ್ಮಿಸಲಾಗಿದ್ದು ಎಲ್.ಇ.ಡಿ. ದೊಡ್ಡ ಪರದೆುಂ ವ್ಯವಸ್ಥೆ ಕೂಡ ವಾಡಲಾಗಿದೆ. ಜ್ಹೀ ಕನ್ನಡ ಸರಿಗಮಪ ಖ್ಯಾತಿುಂ ಹಿನ್ನೆಲೆ ಗಾುಂಕ ಕಂಬದ ರಂಗ್ಂಯು ಸೇರಿದಂತೆ ಅನೇಕ ಖ್ಯಾತ ಗಾುಂಕರು ಹಾಗೂ ರೆಮೊ ಚಿತ್ರದ ತಂಡದಿಂದ ಮನರಂಜನೆ ಕಾರ್ಯಕ್ರಮ ಜೊತೆಗೆ ಹಾಸ್ಯ ರಸದೌತಣವನ್ನು ಖ್ಯಾತ ಹಾಸ್ಯ ನಟರು ನೀಡಲಿದ್ದಾರೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದು, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಭಾಗವಹಿಸುವರು. ಶಾಸಕ ಸಾ.ರಾ.ಮಹೇಶ್ ಅಧ್ಯಕ್ಷತೆಯಲ್ಲಿ ಜಲಪಾತೋತ್ಸವ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು, ನಿರ್ದೇಶಕರು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಅಧಿಕಾರಿ ವರ್ಗದವರು ಭಾಗವಹಿಸಲಿದ್ದು, ಸಾಲಿಗ್ರಾಮ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಿದ್ದಾರೆ.

೨ ವರ್ಷಗಳ ನಂತರ ಜಲಪಾತೋತ್ಸವ: ಕಳೆದ ಎರಡು ವರ್ಷಗಳಿಂದ ಕೋವಿಡ್‌ನಿಂದಾಗಿ ಚುಂಚನಕಟ್ಟೆ ಕಾವೇರಿ ಜಲಪಾತೋತ್ಸವ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಜಲಪಾತೋತ್ಸವ ಕಾರ್ಯಕ್ರಮವನ್ನು ಸರ್ಕಾರ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ನಡೆಸಲಾಗುತ್ತಿದೆ.

ಚುಂಚನಕಟ್ಟೆಯ ಕಾವೇರಿ ಜಲಪಾತೋತ್ಸವ ಹಿನ್ನೆಲೆಯಲ್ಲಿ ಶ್ರೀರಾಮನ ದೇವಾಲಯ, ಬಸವ ವೃತ್ತ, ಕಾವೇರಿ ನದಿಯ ಸೇತುವೆ ಮತ್ತಿತರ ಕಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

andolana

Recent Posts

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

31 seconds ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

4 mins ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

9 mins ago

ಕೊಡಗಿನಲ್ಲಿ ಅಂದಾಜು ೨,೨೭೯ ಹೆಕ್ಟೇರ್ ಬೆಳೆ ಹಾನಿ

ನವೀನ್ ಡಿಸೋಜ ಬೆಳೆ ನಷ್ಟಕ್ಕೊಳಗಾಗಿರುವ ರೈತರಿಗೆ ೧.೯೩ ಕೋಟಿ ರೂ. ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಮಡಿಕೇರಿ: ಸಾಮಾನ್ಯವಾಗಿ ಮುಂಗಾರು ಮಳೆಯೊಂದಿಗೆ…

16 mins ago

ದಸರಾ ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟ ಶುರು

ಕೆ.ಬಿ.ರಮೇಶ್ ನಾಯಕ ಟಿಕೆಟ್ ಜೀನಿ ಸಂಸ್ಥೆಗೆ ಟಿಕೆಟ್ ಮಾರಾಟದ ಹೊಣೆ; ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಮೈಸೂರು: ನಾಡಹಬ್ಬ ದಸರಾ…

21 mins ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ; ಲೋಕಾಯುಕ್ತರಿಂದ ತನಿಖೆ?

ಎಸ್.ಎಸ್.ಭಟ್ ನಂಜನಗೂಡು: ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಪೂರೈಕೆ ಮಾಡುತ್ತಿರುವ ಶೂಗಳು ಕಳಪೆಯಾಗಿದ್ದು ಅಳತೆಯೂ ಸರಿ ಇಲ್ಲ ಎಂಬ…

26 mins ago