Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರನ್ನು ಸನ್ಮಾನಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್

ಹನೂರು : ಬಿಜೆಪಿ ಯುವ ಮುಖಂಡ ನಿಶಾಂತ್ ಶಿವಮೂರ್ತಿರವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ರವರಿಗೆ ನೆನಪಿನ ಕಾಣಿಕೆ ನೀಡುವ ಮೂಲಕ ಸನ್ಮಾನಿಸಿದರು.

ಪಟ್ಟಣದ ಶ್ರೀ ಮಲೆ ಮಾದೇಶ್ವರ ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಕಮಲ ಗುರುತಿನ ಬೆಳ್ಳಿಯ ನೆನಪಿನ ಕಾಣಿಕೆ ನೀಡಿದರು.

ಇದೇ ವೇಳೆ ಯುವ ಮುಖಂಡ ನಿಶಾಂತ್ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಪಣತೊಟ್ಟಿದ್ದೇವೆ. ಈ ದಿನ ನಡೆದ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದ್ದಾರೆ.ಮುಂದಿನ ದಿನಗಳಲ್ಲಿ ಇನ್ನು ಪಕ್ಷ ಸಂಘಟನೆಗೆ ಒತ್ತು ನೀಡಿ ಪಕ್ಷ ಸಂಘಟನೆ ಮಾಡುತ್ತೇನೆ. ಕ್ಷೇತ್ರದಲ್ಲಿನ ಜನರಿಗೆ ಶುದ್ಧ ಕುಡಿಯುವ ನೀರು ದೊರಕಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇನೆ. ಕ್ಷೇತ್ರದ ಬಡವರು ಶ್ರಮಿಕರಿಗೆ ನನ್ನ ಕೈಲಾದ ಸೇವೆ ಮಾಡುತ್ತೇನೆ ಎಂದು ಆಂದೋಲನದೊಂದಿಗೆ ಮಾತನಾಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!