ಚಾಮರಾಜನಗರ: ಡಿ.೧೨ ರಂದು ಹಮ್ಮಿಕೊಳ್ಳಲಾಗಿದ್ದ ಮುಖ್ಯಮಂತ್ರಿಗಳಿಂದ ಚಾ.ನಗರ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭವು ಡಿ.13ಕ್ಕೆ ಮುಂದೂಡಿಕೆಯಾಗಿದೆ.
ಗುಜರಾತ್‌ನಲ್ಲಿ ನಡೆಯಲಿರುವ ನೂತನ ಮುಖ್ಯಮಂತ್ರಿಯ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಳ್ಳುವ ಕಾರಣದಿಂದ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿಯ ಸ್ವಾಗತಕ್ಕಾಗಿ ಜಿಲ್ಲಾಡಳಿತ ಮತ್ತು ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ದಿಢೀರನೆ ಕಾರ್ಯಕ್ರಮವು ೧ ದಿನ ಮುಂದಕ್ಕೆ ಹೋಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.೧೩ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವರು. ನಂತರ ಕೆಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಧ್ಯಾಹ್ನದ ನಂತರ ಬೆಂಗಳೂರಿಗೆ ತೆರಳುವರು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುರಿಯುತ್ತಿರುವ ಮಳೆ ಹೀಗೆೆಯೇ ಮುಂದುವರಿದರೆ ಮುಖ್ಯಮಂತ್ರಿಗಳ ಕಾರ್ಯಕ್ರಮವು ನಿಗದಿತ ಕಾರ್ಯಕ್ರಮಕ್ಕೆ ನಡೆಯುವುದು ಅನುಮಾನ. ಮಳೆ ನಿಂತರೆ ಕಾರ್ಯಕ್ರಮ ಜರುಗಲಿದೆ ಎಂದು ಹೇಳಲಾಗುತ್ತಿದೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…