Mysore
28
overcast clouds

Social Media

ಬುಧವಾರ, 25 ಜೂನ್ 2025
Light
Dark

ಅ.4,5 ರಂದು ಎರಡು ದಿನ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ

ಮೈಸೂರು : ಅಕ್ಟೋಬರ್ 4 ಮತ್ತು 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.

ಅಕ್ಟೋಬರ್ 4ರಂದು ಮಂಗಳವಾರ ಸಂಜೆ 5:35ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಅಕ್ಟೋಬರ್ 5 ರಂದು ಬೆಳಿಗ್ಗೆ 9:00ಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಬಳಿಕ 10.30 ಕ್ಕೆ ರಾಮಕೃಷ್ಣನಗರದ ಐ ಬ್ಲಾಕ್ ನಲ್ಲಿರುವ ಪ್ರಾದೇಶಿಕ ಪತ್ರಿಕೆಯ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮಧ್ಯಾಹ್ನ 2:30 ರಿಂದ 2 50 ರವರೆಗೆ ಅರಮನೆಯ ಬಲದ್ವಾರದಲ್ಲಿರುವ ನಂದಿ ದ್ವಜ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5. 07 ರಿಂದ ಐದು 18ರವರೆಗೆ ಅರಮನೆ ಒಳಾಂಗಣದಲ್ಲಿ ವಿಜಯದಶಮಿ ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ.

ರಾತ್ರಿ 7:30 ರಿಂದ 9:30ವರೆಗೆ ಬನ್ನಿ ಮಂಟಪದಲ್ಲಿ ನಡೆಯುವ ಪಂಜಿನ ಕವಾಯತು ಟಾರ್ಚ್ ಲೈಟ್ ಪೆರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!