ಹನೂರು: ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಕೆಸರಿನಿಂದ ಕೂಡಿದ ರಸ್ತೆಯನ್ನು ಪಿಡಬ್ಯುಡಿ ಇಲಾಖೆಯ ಅಧಿಕಾರಿಗಳು ಸಿಎಂ ಆಗಮಿಸುವ ಒಂದೂವರೆ ಗಂಟೆ ಮುಂಚಿತವಷ್ಟೇ ತರಾತುರಿಯಲ್ಲಿ ಮೆಟ್ಲಿಂಗ್ ರಸ್ತೆಯನ್ನು ನಿರ್ಮಿಸಲಾಯಿತು.
ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಮುಖ್ಯದ್ವಾರದಿಂದ ವೇದಿಕೆಗೆ ತೆರಳುವ ರಸ್ತೆಯು ಕೆಸರಿನಿಂದ ಕೂಡಿತ್ತು. ಈ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸಮತಟ್ಟು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ದಿಸೆಯಲ್ಲಿ ಜೇಡಿಮಣ್ಣು ಸುರಿದು ಸಮತಟ್ಟು ಮಾಡಲಾಗಿತ್ತು. ಆದರೂ ಕೆಸರುಗದ್ದೆಯಂತಾಗಿತ್ತು. ಇದರಿಂದ ಸಿಎಂ ಅಗಮಿಸುವ ವೇಳೆ ತೊಂದರೆಯಾಗಬಹುದು ಎನ್ನುವ ಉದ್ದೇಶದಿಂದ ಅಧಿಕಾರಿಗಳು ತರಾತುರಿಯಲ್ಲಿ ಮೆಟ್ಲಿಂಗ್ ರಸ್ತೆಯನ್ನು ನಿರ್ಮಿಸಲಾಯಿತು. ಈ ವೇಳೆ ಕ್ರೀಡಾಂಗಣದ ಒಳಾಂಗಣಕ್ಕೆ ಸರ್ಕಾರಿ ವಾಹನಗಳ ಪ್ರವೇಶವನ್ನು ಸ್ಥಗಿತಗೊಳಿಸಲಾಗಿತ್ತು. ಪಿಡಬ್ಯುಡಿ ಎಇಇಗಳಾದ ರಾಜೇಶ್ ಮುನ್ಸಿ, ಸದಾಶಿವಮೂರ್ತಿ ಹಾಗೂ ಚಿನ್ನಣ್ಣ ರಸ್ತೆ ನಿರ್ಮಿಸಲು ಹರಸಾಹಸ ಪಟ್ಟರು. ಸಚಿವರ ಸೂಚನೆಯಂತೆ ವೇದಿಕೆ ಮುಂಭಾಗದ ಎರಡು ಬದಿಯಲ್ಲಿ ಹಾಕಲಾಗಿದ್ದ ಸಾಮಾನ್ಯ ಶಾಮಿಯಾನವನ್ನು ಕಳಚಿ ವಾಟರ್ ಫ್ರೂಪ್ ಶಾಮಿಯನ್ನು ಅಳವಡಿಸಲಾಯಿತು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…