ಜಿಲ್ಲೆಗಳು

ಜಿಲ್ಲಾ ನೂತನ ಪತ್ರಿಕಾ ಭಾವನ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನದ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ ಬೆಂಗಳೂರಿನ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮನವಿ ಮಾಡಲಾಯಿತು.

ಮನವಿ ಪುರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಅತ್ಯುತ್ತಮ ಪತ್ರಿಕಾ ಭವನ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಕಾರ ನೀಡುವೆ ಎಂದು ಸಕಾರಾತ್ಮಕವಾಗಿ ಸ್ಪಂದಿಸಿದರು.ಪತ್ರಿಕಾ ಭವನದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಡಿ.21 (ಗುರುವಾರ)ರಂದು ಬೆಳಗ್ಗೆ 11ಗಂಟೆಗೆ ಆಯೋಜಿಸುವಂತೆ ಸೂಚಿಸಿ, ಸಮಾರಂಭದಲ್ಲಿ ತಾವು ಪಾಲ್ಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಇದ್ದರು. ನಿಯೋಗದಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಮಾಜಿ ಅಧ್ಯಕ್ಷ ಸಿ.ಕೆ.ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ಗ್ರಾಮಾಂತರ ಉಪಾಧ್ಯಕ್ಷ ಧರ್ಮಾಪುರ ನಾರಾಯಣ್, ರಾಜ್ಯ ಸಮಿತಿ ಸದಸ್ಯ ಬಿ.ರಾಘವೇಂದ್ರ, ಗ್ರಾಮಾಂತರ ಕಾರ್ಯದರ್ಶಿ ಎಂ.ಮಹದೇವ್, ಕಾರ್ಯಕಾರಿ ಸಮಿತಿ ಸದಸ್ಯರಾದ ಹುಲ್ಲಹಳ್ಳಿ ಶ್ರೀನಿವಾಸ್, ಬಿ.ಆರ್.ಗಣೇಶ್, ದಾ.ರಾ.ಮಹೇಶ್  ಹಾಜರಿದ್ದರು.

andolanait

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

9 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

10 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

10 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

11 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

11 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

15 hours ago