ಜಿಲ್ಲೆಗಳು

ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಿ.ಎಂ ಸಿದ್ದರಾಮಯ್ಯ ಚಾಲನೆ

ಮೈಸೂರು:  ಅರಮನೆ ಮಂಡಳಿ ವತಿಯಿಂದ ಇಂದು ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನ ನವರು ಉದ್ಘಾಟಿಸಿ, ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಸಂತೋಷ ವ್ಯಕ್ತ ಪಡಿಸಿದರು.

ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ ರಥ, ವಿರೂಪಾಕ್ಷ ವಿಗ್ರಹ, ಬ್ರಾಂಡ್ ಮೈಸೂರು ಲೋಗೋ, 8 ಬಾರಿ ಅಂಬಾರಿ ಹೊತ್ತ ಅರ್ಜುನ ಅನೆ ಆಕೃತಿ, ನಾಲ್ವಡಿ ಕೃಷ್ಣ ರಾಜ ಒಡೆಯರ್, ಕೆಂಪ ನಂಜಮ್ಮಣಿ, ಶ್ರಿ ಕಂತ ದತ್ತ ಒಡೆಯರ್, ಮೈಸೂರು ಅರಮನೆ ಮಂಡಳಿ, ಹಾಗೂ ವಿವಿಧ ರೀತಿಯ ಪ್ರಾಣಿಗಳ ಪ್ರತಿಮೆಗಳು ಕಂಡುಬಂದವು.

ಹಣ್ಣುಗಳಿಂದ ಚಿತ್ರಿಸಿದ ಕಲಾಕೃತಿಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ, ನಾಲ್ವಡಿ ಕೃಷ್ಣರಾಜ ಒಡೆಯರ್, ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿಗಳಾದ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್ .ಸಿ ಮಹದೇವಪ್ಪ ಆಕೃತಿಗಳು ಜನರ ಮನ ಸೆಳೆದವು.

ವಿವಿಧ ರೀತಿಯ ಕಲಾಕೃತಿಗಳು, ಸ್ಪೈಡರ್ ಮ್ಯಾನ್, ಬ್ಯಾಟ್ ಮ್ಯಾನ್, ಸೂಪರ್ ಮ್ಯಾನ್ ಹೀಗೆ ಮಕ್ಕಳಿಗೆ ಪ್ರಿಯವಾಗಿರುವ ಹೂಗಳಿಂದ ಅಲಂಕೃತಗೊಂಡ ವಿವಿಧ ಕಲಾಕೃತಿಗಳು, ಸೆಲ್ಫಿ ಪಾಯಿಂಟ್, ರಾಜ್ ಕುಮಾರ್, ಕ್ರಿಸ್ ಮಸ್ ಟ್ರೀ ಗಳು ಜನರನ್ನು ಆಕರ್ಷಿಸಿದವು.

ಮೈಸೂರು ಅರಮನೆ ಮಂಡಳಿ ವತಿಯಿಂದ ರಾಜ ಮನೆತನಕ್ಕೆ ಸೇರಿದ ಆಯ್ದ ಹಳೆಯ ಹಾಗೂ ಅಮೂಲ್ಯ ಛಾಯಾ ಚಿತ್ರಗಳು, ನವರಾತ್ರಿ ಸಂದರ್ಭದಲ್ಲಿ ಮನೆಗಳಲ್ಲಿ ಪ್ರದರ್ಶಿಸಿದ ಬೊಂಬೆಗಳು, ನಾಲ್ವಡಿ ಕೃಷ್ಣ ರಾಜ ಒಡೆಯರು ಮತ್ತು ಮೈಸೂರು ಅರಮನೆ ಕುರಿತು ವಿಡಿಯೋ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

 ಭಾರತ ಸಂವಿಧಾನದ ಪ್ರಸ್ತಾವನೆ: ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಸರ್ವರೂ ಸಮಾನರು ಎಂಬ ಸಂದೇಶವನ್ನು ಸಾರುವ ಸಂವಿಧಾನ ಪೀಠಿಕೆ, ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಸಮಾನತೆ, ಏಕತೆ ಮತ್ತು ಸಮಗ್ರತೆಯನ್ನು ಮೂಡಿಸುವಲ್ಲಿ ಸಂವಿಧಾನದ ಪಾತ್ರ ಮುಖ್ಯ ಎಂಬುದರ ವಿಷಯವನ್ನು ಪ್ರತಿಯೊಬ್ಬ ಸಾರ್ವಜನಿಕರಿಗೂ ತಿಳಿಸಲು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ನಿರ್ಮಿಸಲಾಗಿತ್ತು.

ಅರಮನೆ ಅನೆಗಳಿಂದ ನಾಲ್ವಡಿ ಕೃಷ್ಣ ರಾಜ ಒಡೆಯರು, ಕೆಂಪ ನಂಜಮ್ಮಣಿ, ಶ್ರಿ ಕಂತ ದತ್ತ ಒಡೆಯರ್ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ .ಸಿ. ಮಹದೇವಪ್ಪ. ಶಾಸಕರಾದ ಡಿ. ತಿಮ್ಮಯ್ಯ, ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ, ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭಾಗಹಿಸಿದ್ದರು.

andolanait

Recent Posts

ಮೈಸೂರು | ಧ್ವಜಾರೋಹಣ ನೆರವೇರಿಸಿದ ಸಚಿವ ಮಹದೇವಪ್ಪ : ಸಂವಿಧಾನ ರಕ್ಷಿಸಲು ಕರೆ

ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…

7 mins ago

ಗಣರಾಜ್ಯೋತ್ಸವ ಸಂಭ್ರಮ : ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಧ್ವಜಾರೋಹಣ, ಪರೇಡ್‌ ಆರಂಭ

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…

1 hour ago

ಫ್ಲೀಸ್. . ಬಸ್ ನಿಲ್ಲಿಸಿ ಸಾರ್. . !

ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್‌ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ಗಾಂಧಿ, ಬುದ್ಧ, ಬಸವ ಅರ್ಜೆಂಟಾಗಿ ಬೇಕು

ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…

2 hours ago

ಸರ್ಕಾರ, ರಾಜ್ಯಪಾಲರ ಸಂಘರ್ಷ ; ನ್ಯಾಯಾಂಗ ಮಧ್ಯಪ್ರವೇಶ ಅಗತ್ಯ

ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…

2 hours ago

ದೇಶದ ಐಕ್ಯತೆ, ಪ್ರಗತಿಯ ಸಂಕೇತ-ಸಂವಿಧಾನ

ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…

2 hours ago