ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಶಾಸಕ ಬಿ.ಹರ್ಷವರ್ಧನ್ ಮಾಹಿತಿ
ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ(ನ.೨೮) ದಕ್ಷಿಣ ಕಾಶಿ ನಂಜನಗೂಡಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೦.೩೦ಕ್ಕೆ ಶ್ರೀಕಂಠೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಸರ್ಕಾರದಿಂದ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಜತೆಗೆ ನುಗು ಮತ್ತು ಹೆಡಿಯಾಲ ಏತ ನೀರಾವರಿ ಯೋಜನೆಗೆ ಚಾಲನೆ, ಗೋಳೂರು(ಗೀಕಹಳ್ಳಿ) ಗ್ರಾಮದಲ್ಲಿ ನಿರ್ಮಾಣ ಮಾಡಲಿರುವ ೬೬/೧೧ ಕೆ.ವಿ. ವಿದ್ಯುತ್ ಉಪಕೇಂದ್ರಕ್ಕೆ ಶಂಕುಸ್ಥಾಪನೆ, ನಗರೋತ್ಥಾನ ಹಂತ-೪ರಲ್ಲಿ ನಂಜನಗೂಡು ನಗರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ನಗರೋತ್ಥಾನ ಹಂತ-೩ರಲ್ಲಿ ಗೌರಿಘಟ್ಟದ ಬೀದಿಯಲ್ಲಿರುವ ನಾಯಕ ಸಮುದಾಯ ಭವನ ಉದ್ಘಾಟನೆ, ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿಯವರೊಂದಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಚಿವರಾದ ಗೋವಿಂದ ಎಂ.ಕಾರಜೋಳ, ಬಿ.ಶ್ರೀರಾಮುಲು, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಎಂಟಿಬಿ ನಾಗರಾಜ್, ವಿ.ಸುನಿಲ್ ಕುಮಾರ್ ಭಾಗವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ಆಹ್ವಾನಿತರಾಗಿದ್ದಾರೆ. ಸಂಸದರಾದ ವಿ.ಶ್ರೀನಿವಾಸ ಪ್ರಸಾದ್, ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಯಾರೇ ಎದುರಾಳಿಗಳಾದರೂ ಎದುರಿಸುತ್ತೇನೆ: ಹರ್ಷವರ್ಧನ್
ಮೈಸೂರು: ಮುಂದಿನ ಚುನಾವಣೆಯಲ್ಲಿ ನನಗೆ ಯಾರು ಎದುರಾಳಿಗಳಾಗುತ್ತಾರೆ ಎಂಬುದರ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತದೆಯೋ ಗೊತ್ತಿಲ್ಲ. ನನ್ನ ಹಣೆಬರಹದಲ್ಲಿ ಏನು ಬರೆದಿದೆಯೋ ಅದೇ ಆಗುತ್ತದೆ. ಆದರೆ, ಯಾರೇ ಎದುರಾಳಿಗಳಾದರೂ ಎದುರಿಸುತ್ತೇನೆ ಎಂದು ಶಾಸಕ ಬಿ.ಹರ್ಷವರ್ಧನ್ ಹೇಳಿದರು.
ನಾನು ಯಾವುದೇ ದಲ್ಲಾಳಿಗಳನ್ನು ಮುಂದಿಟ್ಟುಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿಗೆ ಮುಂದಾಗಿಲ್ಲ. ಈ ರೀತಿ ನನ್ನ ಮೇಲೆ ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ನನ್ನ ಹೆಸರು ಕೆಡಿಸಲು ಕೆಲವರು ಈ ರೀತಿಯ ಕುತಂತ್ರ ಮಾಡುತ್ತಿದ್ದಾರೆ ಎಂದರು.
ರಾಜಕೀಯ ಗಿಮಿಕ್: ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೊ ಯಾತ್ರೆ ಪೂರ್ವನಿಯೋಜಿತವಾದುದು. ಭಾರತ್ ಜೋಡೊ ಯಾತ್ರೆಗೆ ಅಷ್ಟೊಂದು ಜನರನ್ನು ಎಲ್ಲಿಂದ, ಯಾವ ರೀತಿ ಕರೆ ತಂದರೆಂಬುದು ನಮಗೆ ಗೊತ್ತಿದೆ. ಇಷ್ಟು ವರ್ಷಗಳ ಕಾಲ ಗಾಂಧಿ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡಿದ್ದಾರೆ. ಈಗ ಏಕೆ ನಂಜನಗೂಡಿನ ಬದನವಾಳುಗೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು? ಇದು ಕೇವಲ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ನಡೆದಿರುವ ಗಿಮಿಕ್ ಎಂದು ಅಸಮಾಧಾನ ವ್ಯಕ್ತಪಡಿಸಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…