ಚಾಮರಾಜನಗರ: ಕೇಂದ್ರ ಸರ್ಕಾರವು ಕ್ವಿಂಟಲ್ ತೆಂಗಿನ ಕಾಯಿಗೆ ಕನಿಷ್ಠ ಬೆಂಬಲ ಬೆಲೆ ೨೮೬೦ ರೂ. ಘೋಷಿಸಿರುವುದನ್ನು ಈಗಲಾದರೂ ಅನುಷ್ಠಾನಗೊಳಿಸಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್ ಒತ್ತಾಯಿಸಿದ್ದಾರೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ಕೆ.ಜಿ. ತೆಂಗಿನಕಾಯಿ ಬೆಲೆ ೨೦-೨೧ ರೂ.ಗೆ ಕುಸಿದಿದ್ದು, ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಖರೀದಿ ಕೇಂದ್ರ ತೆರೆದು ಕೇಂದ್ರ ಸರ್ಕಾರ ಈಗಾಗಲೇ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗೆ ಖರೀದಿಸಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಕಳೆದ ವರ್ಷ ಇದೇ ಅವಧಿಯಲ್ಲಿ ಕೆ.ಜಿ. ತೆಂಗಿನ ಕಾಯಿ ಬೆಲೆ ೪೧ ರೂ.ಗಳಿತ್ತು. ತೆಂಗು ಬೆಳೆಯಲು, ಕೊಯ್ಲು ಮಾಡಲು, ಸಿಪ್ಪೆ ಸುಲಿದು ಮಾರುಕಟ್ಟೆಗೆ ಸಾಗಿಸಲು ವೆಚ್ಚ ಹೆಚ್ಚಾಗಿದೆ. ಈಗಿರುವ ೨೦-೨೧ ರೂ. ಬೆಲೆಯಿಂದ ರೈತರಿಗೆ ನಷ್ಟವಾಗುತ್ತಿದೆ ಎಂದರು.
ತೆಂಗಿನಕಾಯಿಯ ಬೆಲೆ ಕುಸಿದಿರುವ ಬಗ್ಗೆ ಜಿಲ್ಲಾಡಳಿತವು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದರೆ ಬೆಂಬಲ ಬೆಲೆಯಲ್ಲಿ ಖರೀದಿಗೆ ಚಾಲನೆ ಸಿಗಲಿದೆ. ಈ ಕುರಿತು ಸಂಬAಧಪಟ್ಟವರು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
೨೦೧೨-೧೩ನೇ ಸಾಲಿನಲ್ಲಿ ಕಾಯಿಯ ಬೆಲೆ ರೂ.ಗೆ ಕುಸಿದಿತ್ತು. ಆಗ ರಾಜ್ಯ ಸರ್ಕಾರ ೧೪ ರೂ. ಕನಿಷ್ಠ ಬೆಲೆಗೆ ಖರೀದಿಸಿತ್ತು. ೨೦೧೬-೧೭ನೇ ಸಾಲಿನಲ್ಲೂ ಬೆಲೆ ಕುಸಿತ ಕಂಡಾಗ ೧೬ ರೂ.ಗೆ ಖರೀದಿ ಮಾಡಿ ರೈತರ ನೆರವಿಗೆ ಧಾವಿಸಿತ್ತು. ಅದೇ ಮಾದರಿ ಅನುಸರಿಸಬೇಕು ಎಂದು ಕೋರಿದರು.
ಜಿಲ್ಲೆಯಲ್ಲಿ ೧೩೦೭೦ ಹೆಕ್ಟೇರ್‌ನಲ್ಲಿ ತೆಂಗು ಫಸಲು ಬೆಳೆ ಬೆಳೆಯಲಾಗುತ್ತಿದೆ. ಚಾ.ನಗರ ತಾಲ್ಲೂಕಿನಲ್ಲಿ ೮೪೦೭, ಗುಂಡ್ಲುಪೇಟೆ ತಾ.ನಲ್ಲಿ ೨೨೦೦ ಹೆ., ಕೊಳ್ಳೇಗಾಲ ತಾ.ನಲ್ಲಿ ೯೦೩೩ ಹೆ., ಹನೂರು ತಾ.ನಲ್ಲಿ ೬೦೭ ಹೆ., ಯಳಂದೂರು ತಾ.ನಲ್ಲಿ ೯೫೩ ಹೆ. ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದೆ ಎಂದು ಹೇಳಿದರು.
ಬೆಂಬಲಬೆಲೆ ಘೋಷಿಸಿ ಸುಮ್ಮನೆ ಕೂರುವುದರಿಂದ ಪ್ರಯೋಜನವಿಲ್ಲ. ಬೇಗ ಅನುಷ್ಠಾನಗೊಳಿಸಿ ಕೆ.ಜಿ. ತೆಂಗಿನ ಕಾಯಿಯನ್ನು ೩೦-೩೫ ರೂ.ಗಳಿಗೆ ಖರೀದಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…
ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್‌ನ…
ಚೆನ್ನೈ : ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ …
ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…
ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ…