ಎಚ್.ಡಿ.ಕೋಟೆ: ಜಿಲ್ಲಾಧಿಕಾರಿಗಳ ಹಳ್ಳಿಯ ಕಡೆ ಕಾರ್ಯಕ್ರಮ ಮತ್ತು ಗ್ರಾಮ ವಾಸ್ತವ್ಯದ ಅಂಗವಾಗಿ ಎಚ್.ಡಿ.ಕೋಟೆಯ ಭೀಮನಕೊಲ್ಲಿಗೆ ಆಗಮಿಸಿದ್ದ ಕಂದಾಯ ಸಚಿವ ಆರ್.ಅಶೋಕ್ ರವರನ್ನು ತೋಟಗಾರಿಕ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವತಿಯಿಂದ ಸಾಂಪ್ರದಾಯಿಕ ಕುಣಿತಗಳೊಂದಿಗೆ ಟ್ರಾಕ್ಟರ್ ಮೂಲಕ ಮೆರವಣಿಗೆಯಲ್ಲಿ ವಿಶೇಷವಾಗಿ ಸ್ವಾಗತಿಸಲಾಯಿತು.
ಶನಿವಾರ ತಾಲ್ಲೂಕಿನ ಭೀಮನಕೊಲ್ಲಿಗೆ ಆಗಮಿಸಿದ ಸಚಿವ ಆರ್.ಅಶೋಕ್ ರವರನ್ನು ವಿವಿಧ ಆದಿವಾಸಿ ಸಮುದಾಯಗಳ ಸಾಂಪ್ರದಾಯಿಕ ಕುಣಿತಗಳು, ನಗಾರಿ, ಪೂಜಾ ಕುಣಿತ, ಕರಡಿ ಕುಣಿತ, ಬ್ಯಾಂಡ್ ಸೆಟ್, ಡೊಳ್ಳು ಕುಣಿತ, ನಂದಿ ಕಂಬ ಕುಣಿತ, ವೀರಗಾಸೆ, ಕಳಸದೊಂದಿಗೆ ಮುಂತಾದ ಸಾಂಪ್ರದಾಯಿಕ ಕುಣಿತದೊಂದಿಗೆ ಸಿಂಗರಿಸಿದ ಟ್ರಾಕ್ಟರ್ ಮೂಲಕ ಮೆರವಣಿಗೆಯಲ್ಲಿ ಭೀಮಕೊಲ್ಲಿ ದೇವಸ್ಥಾನದ ಆವರಣಕ್ಕೆ ಬರಮಾಡಿಕೊಳ್ಳಲಾಯಿತು.
ನಂದಿಧ್ವಜಕ್ಕೆ ಪೂಜೆ: ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ ಆರ್.ಅಶೋಕ್ ರವರು ಶಾಸಕ ಅನಿಲ್ ಚಿಕ್ಕಮಾದು ಹಾಗೂ ವಿವಿಧ ಮುಖಂಡರೊಂದಿಗೆ ಜೊತೆಗೂಡಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ದೇವಾಲಯದ ಆವರಣದಲ್ಲಿ ನಿರ್ಮಿಸಿದ್ದ ಮಳಿಗೆಗಳ ಉದ್ಘಾಟಿನೆ : ಇದೇ ವೇಳೆ ಭೀಮನಕೊಲ್ಲಿ ಮಹದೇಶ್ವರ ದೇವಾಲಯದ ಆವರಣದಲ್ಲಿ ವಿವಿಧ ಇಲಾಖೆಗಳ ವತಿಯಿಂದ ನಿರ್ಮಿಸಲಾಗಿದ್ದ ವಿವಿಧ ವಸ್ತು ಪ್ರದರ್ಶನರ ಮಳಿಗೆಗಳು ಉದ್ಘಾಟಿಸಿ ಬಳಿಕ ಮಳಿಗೆಗಳನ್ನು ಪರಿಶೀಲಿಸಿದರು. ಬಳಿಕ ಎಚ್.ಡಿ.ಕೋಟೆ ಕ್ಷೇತ್ರಕ್ಕೆ ಆಗಮಿಸಿದ ಹಿನ್ನೆಲೆ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ ಶಾಸಕ ಅನಿಲ್ ಚಿಕ್ಕಮಾದು, ಮುಖಂಡರಾದ ಕೃಷ್ಣಸ್ವಾಮಿ, ಹಂಚೀಪುರ ಗುರುಸ್ವಾಮಿ, ಗಿರೀಶ್, ಅರುಣ್ ಕುಮಾರ್ ಗೌಡ, ರಾಜೇಂದ್ರ, ಅರಸ್ಸು, ವಿಜಯ್ ಕುಮಾರ್, ರುದ್ರಪ್ಪ, ಗಣೇಶಾಚಾರಿ, ಸತೀಶ್ ಬಹದ್ದೂರ್, ತಹಸೀಲ್ದಾರ್ ಚಲುವರಾಜು, ಅಧಿಕಾರಿಗಳಾದ ಸಣ್ಣರಾಮಪ್ಪ, ರಾಜೇಶ್ ಜೊರಾಲ್ಡ್, ವೃತ್ತ ನಿರೀಕ್ಷಕ ಆನಂದ್ ಮುಂತಾದವರು ಹಾಜರಿದ್ದರು.
ಬೆಂಗಳೂರು : ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ರೂ.1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್…
ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…
ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…
ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…