Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮ.ಬೆಟ್ಟದ ಬಳಿ ಕಾರುಗಳ ನಡುವೆ ಡಿಕ್ಕಿ

ಹನೂರು: ಎರಡು ಕಾರುಗಳ ನಡುವೆ ಅಪಘಾತವಾಗಿ, ಎರಡೂ ಕಾರಿನಲ್ಲಿದ್ದವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ರಸ್ತೆಯ ಪೊನ್ನಾಚಿ ಕ್ರಾಸ್ ಎರಡನೇ ತಿರುವಿನಲ್ಲಿ ನಡೆದಿದೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ವಾಪಸ್ ಆಗುತ್ತಿದ್ದವರ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ವಾಹನಗಳು ಜಖಂಗೊಂಡಿವೆ. ಆದರೆ, ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಎಂಬ ನಾಮಫಲಕವಿರುವ ಕೆ.ಎ.01.ಇ.3316 ಕಾರು ಹಾಗೂ ಕೆ.ಎ.09.ಎನ್.ಹೆಚ್.0749 ಕಾರುಗಳ ನಡುವೆ ಈ ಅಪಘಾತವಾಗಿದೆ. ಈ ಸಂಬಂಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!