ಪಾರಂಪರಿಕ ಕಟ್ಟಡಗಳನ್ನು ಕಾಪಾಡಬೇಕೆಂಬುದು ನಾಗರಿಕರ ವಾದ; ಪುನರ್ ನಿರ್ಮಾಣವೊಂದೇ ದಾರಿ ಎಂಬುದು ಅಧಿಕಾರಿಗಳ ಮಾತು
ಮೈಸೂರು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತವಾದ ಬೆನ್ನಲ್ಲೇ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೆಸರೆರಚಾಟ ಶುರುವಾಗಿದೆ.
ಪ್ರವಾಸೋದ್ಯಮದ ದೃಷ್ಟಿಯಿಂದ ಮಹಾರಾಜರ ಆಳ್ವಿಕೆ ಕಾಲದಲ್ಲಿ ನಿರ್ಮಿಸಿರುವ ಪಾರಂಪರಿಕ ಕಟ್ಟಡಗಳನ್ನು ಜತನದಿಂದ ಕಾಪಾಡಿಕೊಳ್ಳಬೇಕು ಎಂಬುದು ರಾಜ ಮನೆತನದವರು ಹಾಗೂ ಮೈಸೂರು ನಾಗರಿಕರ ವಾದವಾಗಿದ್ದರೆ, ‘ಶಿಥಿಲ ಕಟ್ಟಡಗಳನ್ನು ಕಾಪಾಡಿಕೊಳ್ಳುವುದು ಅಸಾಧ್ಯದ ಮಾತು. ಏನಿದ್ದರೂ ಶಿಥಿಲ ಕಟ್ಟಡಗಳನ್ನು ಕೆಡವಿ ಪುನರ್ ನಿರ್ಮಾಣ ಮಾಡುವುದೊಂದೇ ದಾರಿ’ ಎನ್ನುವುದು ಲೋಕೋಪಯೋಗಿ ಇಲಾಖೆ ಆಧಿಕಾರಿಗಳ ವಾದ. ಅಂದಿನ ಕಾಲಕ್ಕೆ ಯಾವುದೇ ಕಟ್ಟಡ ನಿರ್ಮಾಣಕ್ಕೂ ಫಿಲ್ಲರ್‌ಗಳನ್ನು ಹಾಕಿ ಕಾಂಕ್ರೀಟ್ ಬಳಸುತ್ತಿರಲಿಲ್ಲ. ದಪ್ಪನಾದ ಇಟ್ಟಿಗೆ ಗೋಡೆಗೆ ಸುಣ್ಣದ ಗಾರೆ, ಕಲ್ಲುಗಳನ್ನು ಬಳಸಿ ಕಟ್ಟಲಾಗಿದೆ. ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹೆಚ್ಚು ಮಳೆಯಾದಾಗ ಈ ಕಟ್ಟಡಗಳ ಗೋಡೆಗಳು ನೀರು ಹೀರಿಕೊಂಡು ಶಿಥಿಲಗೊಳ್ಳುತ್ತಿವೆ. ಜತೆಗೆ ಕಟ್ಟಡಗಳ ಅಕ್ಕ ಪಕ್ಕ ಇರುವ ಬೃಹದಾಕಾರದ ಮರಗಳಿಂದ ಉದುರಿರುವ ಎಲೆಗಳ ರಾಶಿ ಜತೆಗೆ ತೇವಾಂಶ ಇದ್ದ ಕಡೆಗಳಲ್ಲೆಲ್ಲ ಗಿಡ-ಗಂಟಿಗಳು ಬೆಳೆದು ಕಟ್ಟಡಗಳು ಶಿಥಿಲಗೊಳ್ಳಲು ಕಾರಣವಾಗಿವೆ ಎನ್ನುತ್ತಾರೆ ಪಾರಂಪರಿಕ ತಜ್ಞ ಪ್ರೊ.ಎನ್.ಎಸ್.ರಂಗರಾಜ್.
ಹೆರಿಟೇಜ್ ಕಮಿಟಿಯತ್ತ ಬೊಟ್ಟು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತ ಪ್ರಕರಣವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ಗಮನಕ್ಕೆ ತಂದಿದ್ದು, ದೀಪಾವಳಿ ಹಬ್ಬ ಕಳೆದ ನಂತರ ಸಚಿವರು ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಜತೆಗೆ ಈಗಾಗಲೇ ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳನ್ನು ಕರೆಸಿ ಸ್ಥಳ ಪರಿಶೀಲನೆ ಮಾಡಿಸಿದ್ದು, ೧೦೬ ವರ್ಷಗಳಷ್ಟು ಹಳೆಯದಾದ ಸಂಪೂರ್ಣ ಶಿಥಿಲವಾಗಿರುವ ಕಾಲೇಜು ಕಟ್ಟಡದ ಪುನರ್ ನಿರ್ಮಾಣ ಸಾಧ್ಯವೇ ಇಲ್ಲ ಎಂದು ಶಾಸಕ ಎಲ್.ನಾಗೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳ ಈ ಅಭಿಪ್ರಾಯದ ಹಿನ್ನೆಲೆಯಲ್ಲಿ ಕುಸಿದು ಬಿದ್ದಿರುವ ಕಾಲೇಜು ಕಟ್ಟಡದ ಅಷ್ಟೂ ಭಾಗವನ್ನೂ ಸಂಪೂರ್ಣ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸುವ ಸಂಬಂಧ ಅಂದಾಜು ವೆಚ್ಚ ಸಿದ್ಧಪಡಿಸಿ, ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳಿಗೆ ಸೂಚಿಸಿದ್ದು, ಮೂರ್ನಾಲ್ಕು ದಿನಗಳಲ್ಲಿ ವರದಿ ಕೈಸೇರಲಿದೆ ಎಂದು ತಿಳಿಸಿದರು.
ಮೈಸೂರಿನಲ್ಲಿ ಮಹಾರಾಜರ ಕಾಲದಲ್ಲಿ ಕಟ್ಟಿಸಲಾಗಿರುವ ನೂರಾರು ಕಟ್ಟಡಗಳು ಸೂಕ್ತ ನಿರ್ವಹಣೆ ಇಲ್ಲದೆ ಶಿಥಿಲಗೊಂಡು ಕುಸಿಯುತ್ತಿವೆ. ಈ ಕಟ್ಟಡಗಳ ಸಂರಕ್ಷಣೆಗಾಗಿ ಸರ್ಕಾರ ಕೂಡಲೇ ೫೦೦ ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳನ್ನೇ ಉಳಿಸಿಕೊಳ್ಳಲಾಗಲಿಲ್ಲವೆಂದರೆ ದಸರಾ ವೇಳೆ ಪ್ರವಾಸಿಗರಿಗೆ ತೋರಿಸಲು ಏನು ಉಳಿಯುತ್ತದೆ.
–ಪ್ರೊ.ಎನ್.ಎಸ್.ರಂಗರಾಜು, ಸದಸ್ಯರು, ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ
ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿಯಲ್ಲಿರುವ ನಾಲ್ಕೈದು ಜನರು ಯಾವ ಕೆಲಸವನ್ನೂ ಮಾಡಲು ಬಿಡುತ್ತಿಲ್ಲ. ಈ ಹಿಂದೆೆಯೇ ಕಟ್ಟಡದ ನವೀಕರಣಕ್ಕೆ ೨.೫ ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಲಾಗಿತ್ತು. ಭವಿಷ್ಯದ ದೃಷ್ಟಿಯಿಂದ ಇಡೀ ಕಟ್ಟಡವನ್ನು ನೆಲಸಮಗೊಳಿಸಿ ಹೊಸದಾಗಿ ಕಾಲೇಜು ಕಟ್ಟಡ ನಿರ್ಮಿಸಬೇಕಾದ ಅಗತ್ಯತೆ ಇದೆ.
-ಎಲ್.ನಾಗೇಂದ್ರ, ಶಾಸಕರು
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…