ಜಿಲ್ಲೆಗಳು

ಕಾಲೇಜು ಕಟ್ಟಡ ಕುಸಿತ: ಕೆಸರೆರಚಾಟ ಶುರು

ಪಾರಂಪರಿಕ ಕಟ್ಟಡಗಳನ್ನು ಕಾಪಾಡಬೇಕೆಂಬುದು ನಾಗರಿಕರ ವಾದ; ಪುನರ್ ನಿರ್ಮಾಣವೊಂದೇ ದಾರಿ ಎಂಬುದು ಅಧಿಕಾರಿಗಳ ಮಾತು

ಮೈಸೂರು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತವಾದ ಬೆನ್ನಲ್ಲೇ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೆಸರೆರಚಾಟ ಶುರುವಾಗಿದೆ.
ಪ್ರವಾಸೋದ್ಯಮದ ದೃಷ್ಟಿಯಿಂದ ಮಹಾರಾಜರ ಆಳ್ವಿಕೆ ಕಾಲದಲ್ಲಿ ನಿರ್ಮಿಸಿರುವ ಪಾರಂಪರಿಕ ಕಟ್ಟಡಗಳನ್ನು ಜತನದಿಂದ ಕಾಪಾಡಿಕೊಳ್ಳಬೇಕು ಎಂಬುದು ರಾಜ ಮನೆತನದವರು ಹಾಗೂ ಮೈಸೂರು ನಾಗರಿಕರ ವಾದವಾಗಿದ್ದರೆ, ‘ಶಿಥಿಲ ಕಟ್ಟಡಗಳನ್ನು ಕಾಪಾಡಿಕೊಳ್ಳುವುದು ಅಸಾಧ್ಯದ ಮಾತು. ಏನಿದ್ದರೂ ಶಿಥಿಲ ಕಟ್ಟಡಗಳನ್ನು ಕೆಡವಿ ಪುನರ್ ನಿರ್ಮಾಣ ಮಾಡುವುದೊಂದೇ ದಾರಿ’ ಎನ್ನುವುದು ಲೋಕೋಪಯೋಗಿ ಇಲಾಖೆ ಆಧಿಕಾರಿಗಳ ವಾದ. ಅಂದಿನ ಕಾಲಕ್ಕೆ ಯಾವುದೇ ಕಟ್ಟಡ ನಿರ್ಮಾಣಕ್ಕೂ ಫಿಲ್ಲರ್‌ಗಳನ್ನು ಹಾಕಿ ಕಾಂಕ್ರೀಟ್ ಬಳಸುತ್ತಿರಲಿಲ್ಲ. ದಪ್ಪನಾದ ಇಟ್ಟಿಗೆ ಗೋಡೆಗೆ ಸುಣ್ಣದ ಗಾರೆ, ಕಲ್ಲುಗಳನ್ನು ಬಳಸಿ ಕಟ್ಟಲಾಗಿದೆ. ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹೆಚ್ಚು ಮಳೆಯಾದಾಗ ಈ ಕಟ್ಟಡಗಳ ಗೋಡೆಗಳು ನೀರು ಹೀರಿಕೊಂಡು ಶಿಥಿಲಗೊಳ್ಳುತ್ತಿವೆ. ಜತೆಗೆ ಕಟ್ಟಡಗಳ ಅಕ್ಕ ಪಕ್ಕ ಇರುವ ಬೃಹದಾಕಾರದ ಮರಗಳಿಂದ ಉದುರಿರುವ ಎಲೆಗಳ ರಾಶಿ ಜತೆಗೆ ತೇವಾಂಶ ಇದ್ದ ಕಡೆಗಳಲ್ಲೆಲ್ಲ ಗಿಡ-ಗಂಟಿಗಳು ಬೆಳೆದು ಕಟ್ಟಡಗಳು ಶಿಥಿಲಗೊಳ್ಳಲು ಕಾರಣವಾಗಿವೆ ಎನ್ನುತ್ತಾರೆ ಪಾರಂಪರಿಕ ತಜ್ಞ ಪ್ರೊ.ಎನ್.ಎಸ್.ರಂಗರಾಜ್.

ಹೆರಿಟೇಜ್ ಕಮಿಟಿಯತ್ತ ಬೊಟ್ಟು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತ ಪ್ರಕರಣವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ಗಮನಕ್ಕೆ ತಂದಿದ್ದು, ದೀಪಾವಳಿ ಹಬ್ಬ ಕಳೆದ ನಂತರ ಸಚಿವರು ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಜತೆಗೆ ಈಗಾಗಲೇ ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳನ್ನು ಕರೆಸಿ ಸ್ಥಳ ಪರಿಶೀಲನೆ ಮಾಡಿಸಿದ್ದು, ೧೦೬ ವರ್ಷಗಳಷ್ಟು ಹಳೆಯದಾದ ಸಂಪೂರ್ಣ ಶಿಥಿಲವಾಗಿರುವ ಕಾಲೇಜು ಕಟ್ಟಡದ ಪುನರ್ ನಿರ್ಮಾಣ ಸಾಧ್ಯವೇ ಇಲ್ಲ ಎಂದು ಶಾಸಕ ಎಲ್.ನಾಗೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳ ಈ ಅಭಿಪ್ರಾಯದ ಹಿನ್ನೆಲೆಯಲ್ಲಿ ಕುಸಿದು ಬಿದ್ದಿರುವ ಕಾಲೇಜು ಕಟ್ಟಡದ ಅಷ್ಟೂ ಭಾಗವನ್ನೂ ಸಂಪೂರ್ಣ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸುವ ಸಂಬಂಧ ಅಂದಾಜು ವೆಚ್ಚ ಸಿದ್ಧಪಡಿಸಿ, ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳಿಗೆ ಸೂಚಿಸಿದ್ದು, ಮೂರ್ನಾಲ್ಕು ದಿನಗಳಲ್ಲಿ ವರದಿ ಕೈಸೇರಲಿದೆ ಎಂದು ತಿಳಿಸಿದರು.


ಮೈಸೂರಿನಲ್ಲಿ ಮಹಾರಾಜರ ಕಾಲದಲ್ಲಿ ಕಟ್ಟಿಸಲಾಗಿರುವ ನೂರಾರು ಕಟ್ಟಡಗಳು ಸೂಕ್ತ ನಿರ್ವಹಣೆ ಇಲ್ಲದೆ ಶಿಥಿಲಗೊಂಡು ಕುಸಿಯುತ್ತಿವೆ. ಈ ಕಟ್ಟಡಗಳ ಸಂರಕ್ಷಣೆಗಾಗಿ ಸರ್ಕಾರ ಕೂಡಲೇ ೫೦೦ ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳನ್ನೇ ಉಳಿಸಿಕೊಳ್ಳಲಾಗಲಿಲ್ಲವೆಂದರೆ ದಸರಾ ವೇಳೆ ಪ್ರವಾಸಿಗರಿಗೆ ತೋರಿಸಲು ಏನು ಉಳಿಯುತ್ತದೆ.

ಪ್ರೊ.ಎನ್.ಎಸ್.ರಂಗರಾಜು, ಸದಸ್ಯರು, ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ


ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿಯಲ್ಲಿರುವ ನಾಲ್ಕೈದು ಜನರು ಯಾವ ಕೆಲಸವನ್ನೂ ಮಾಡಲು ಬಿಡುತ್ತಿಲ್ಲ. ಈ ಹಿಂದೆೆಯೇ ಕಟ್ಟಡದ ನವೀಕರಣಕ್ಕೆ ೨.೫ ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕ್ರಿಯಾಯೋಜನೆ    ಸಿದ್ಧಪಡಿಸಲಾಗಿತ್ತು. ಭವಿಷ್ಯದ ದೃಷ್ಟಿಯಿಂದ ಇಡೀ ಕಟ್ಟಡವನ್ನು ನೆಲಸಮಗೊಳಿಸಿ ಹೊಸದಾಗಿ ಕಾಲೇಜು ಕಟ್ಟಡ ನಿರ್ಮಿಸಬೇಕಾದ ಅಗತ್ಯತೆ ಇದೆ.

-ಎಲ್.ನಾಗೇಂದ್ರ, ಶಾಸಕರು

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago