ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿರುದ್ಯೋಗಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಗಾರವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಎಂಆರ್ ಮಂಜುನಾಥ್ ಮತ್ತು ಎನ್ ಸಿ ಜಿ ಕಾಂಪಿಟೇಟಿವ್ ಇನ್ಸ್ಟಿಟ್ಯೂಟ್ ರವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕಾರ್ಯಗಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ಷೇತ್ರದಲ್ಲಿನ ನಿರುದ್ಯೋಗಿ ವಿದ್ಯಾವಂತರಿಗೆ ಅನುಕೂಲವಾಗುವ ಉದ್ದೇಶದಿಂದ ಇಂತಹ ಸ್ಪರ್ಧಾತ್ಮಕ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಇದು ಯಾವುದೇ ಸೌಲಭ್ಯಗಳಿಲ್ಲದ ಗುಡ್ಡಗಾಡು ಗ್ರಾಮೀಣ ಯುವಜನತೆಗೆ ಭವಿಷ್ಯ ಕಟ್ಟಿಕೊಡಲು ಸಹಕಾರಿಯಾಗುತ್ತದೆ. ಆದ್ದರಿಂದ ಈ ಕಾರ್ಯಗಾರವನ್ನು ಪ್ರಾಮಾಣಿಕವಾಗಿ ಬಳಸಿಕೊಂಡು ನಿಮ್ಮ ತಂದೆ ತಾಯಿ ಮತ್ತು ಹುಟ್ಟೂರಿಗೆ ಹೆಸರು ಮತ್ತು ಕೀರ್ತಿ ತರುವಂತವರಾಗಿ ಎಂದು ಸಲಹೆ ನೀಡಿದರು. ಆರು ತಿಂಗಳ ಈ ಕಾರ್ಯಗಾರವನ್ನು ಉತ್ತಮವಾಗಿ ಬಳಸಿಕೊಂಡು ಉನ್ನತ ಸ್ಥಾನಕ್ಕೆ ಏರಿ ನಿಮ್ಮ ಕುಟುಂಬ ಮತ್ತು ಗ್ರಾಮಕ್ಕೆ ನಿಮ್ಮದೇ ಕೊಡುಗೆ ನೀಡುವಂತವರಾಗಬೇಕು ಎಂಬುದು ನಮ್ಮ ನಿರೀಕ್ಷೆ, ಈ ಕಾರ್ಯಗಾರದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಸಾಧಿಸಿ ನಿಮ್ಮ ಗುರಿಯನ್ನು ನೀವು ಮುಟ್ಟಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯೆ ಮುಮ್ತಾಜ್ ಬೇಗಂ, ಮಾಜಿ ಸದಸ್ಯರುಗಳಾದ ಶಿವಪ್ಪ , ನಾಗೇಂದ್ರ ಬಾಬು ವಕೀಲ ಯೋಗೇಶ್, ಎನ್.ಸಿ.ಜಿ.ಮುಖ್ಯಸ್ಥ ಸಿ.ನಾಗಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಗಿರಿಧರ ಪೂಜಾರಿ, ಸುಶ್ಮಿತಾ, ಹಿರಿಯ ಮುಖಂಡರಾದ ಮುಳ್ಳೂರು ಶಿವಮಲ್ಲು, ಜೆಸ್ಸಿಮ್ ಪಾಷಾ, ಮಂಜೇಶ್,ಯರಂಬಾಡಿ ಮುರುಗೇಶ್ ಗೋವಿಂದ್, ವೆಂಕಟೇಶ್,ಹಾಗೂ ಸ್ಪರ್ಧಾರ್ಥಿಗಳು ಹಾಜರಿದ್ದರು.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…