ಹನೂರು: ಹನೂರಿನಲ್ಲಿ ಸೆಪ್ಟಂಬರ್ 10 ರಂದು ಜೆಡಿಎಸ್ ಹಾಗೂ ಬೆಂಗಳೂರಿನ ಎನ್‍ಸಿಜಿ ಕಾಂಪಿಟೇಟಿವ್ ಇನ್ಸ್ಟಿಟ್ಯೂಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದರು.
ಎನ್‍ಸಿಜಿ ಸಂಸ್ಥೆಯ ಮುಖ್ಯಸ್ಥ ನಾಗಪ್ಪ ಮಾತನಾಡಿ, ಹನೂರು ಭಾಗದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪದವಿ ಶಿಕ್ಷಣ ಪಡೆದಿದ್ದಾರೆ. ಆದರೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಸಿಗುತ್ತಿರಲಿಲ್ಲ. ಆಗಾಗಿ ವಿದ್ಯಾರ್ಥಿಗಳಿಗೆ ತರಬೇತಿ ಅಗತ್ಯತೆ ಇತ್ತು. ಈ ದಿಸೆಯಲ್ಲಿ ಇದೀಗ ಪ್ರಥಮ ಬಾರಿಗೆ ಹನೂರಿನಲ್ಲಿ ಎಂ.ಆರ್ ಮಂಜುನಾಥ್ ನೇತೃತ್ವದಲ್ಲಿ ಉಚಿತವಾಗಿ ತರಬೇತಿ ನೀಡುತ್ತಿರುವುದು ಉತ್ತಮವಾದ ಕೆಲಸ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಾಗ್ಯದ ರವಿಕುಮಾರ್, ನಾಗೇಂದ್ರಬಾಬು, ಶಿವಮೂರ್ತಿ, ಶಾಹಿಲ್, ರಾಜುಗೌಡ, ಮಹದೇವ, ಡಿ.ಕೆ ಸುರೇಶ್, ಮಹದೇವ, ಸತೀಶ್ ಹಾಗೂ ಇನ್ನಿತರರಿದ್ದರು.
ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…
ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…
ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…