ಜಿಲ್ಲೆಗಳು

ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರ ಸದುಪಯೋಗ ಪಡಿಸಿಕೊಳ್ಳಿ : JDS ಮುಖಂಡ ಎಂ ಆರ್‌ ಮಂಜುನಾಥ್

ಹನೂರು: ಕ್ಷೇತ್ರ ವ್ಯಾಪ್ತಿಯ ಯುವಕ-ಯುವತಿಯರು ಜೆಡಿಎಸ್ ಪಕ್ಷ ಹಾಗೂ ಎನ್.ಸಿ.ಜಿ. ಸ್ಪರ್ಧಾತ್ಮಕ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಲಾಗಿರುವ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ. ಆರ್.ಮಂಜುನಾಥ್ ತಿಳಿಸಿದರು.
ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಹನೂರು ಭಾಗ ಗುಡ್ಡಗಾಡಿನಿಂದ ಕೂಡಿದ್ದು, ಇಂದಿಗೂ ಇಲ್ಲಿನ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಕೂಲಿ ನಾಲಿ ಮಾಡಿ ಸಾಕುತ್ತಿದ್ದಾರೆ. ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯುವುದು ಸುಲಭವಾದ ವಿಚಾರವಲ್ಲ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಪ್ರತಿಭೆಗಳು ಅಡಕವಾಗಿವೆ. ಅದನ್ನು ಹೊರತರುವ ವೇದಿಕೆ ಅತ್ಯವಶ್ಯಕವಾಗಿದ್ದು, ಅವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಇದರಲ್ಲಿ ರಾಜಕೀಯ ಉದ್ದೇಶವಿಲ್ಲ. ಸರ್ಕಾರ ಪೊಲೀಸ್ ಪೇದೆ ಹುದ್ದೆ ನೇಮಕಾತಿಗೆ ಅರ್ಜಿ ಸಲ್ಲಿಸಲು ನೋಟಿಫಿಕೇಶನ್ ಹೊರಡಿಸಿದ್ದು, ಇಲ್ಲಿನ ಯುವಕ-ಯುವತಿಯರು ಉದ್ಯೋಗ ಗಳಿಸಿ ಆರ್ಥಿಕವಾಗಿ ಸಬಲರಾದರೆ ನಮ್ಮ ಕಾರ್ಯಕ್ಕೆ ಅದೇ ಸಾರ್ಥಕತೆ ಉಂಟಾಗುತ್ತದೆ ಎಂದರು.
ಎನ್. ಸಿ. ಜಿ.  ಸಂಸ್ಥೆಯ ಮುಖ್ಯಸ್ಥ  ನಾಗಪ್ಪ ಮಾತನಾಡಿ, ವಿದ್ಯಾಭ್ಯಾಸದ ಬಳಿಕ ಸರ್ಕಾರಿ ಉದ್ಯೋಗ ದೊರೆಯುವುದಿಲ್ಲ ಎಂದು ಅನೇಕ ವಿದ್ಯಾರ್ಥಿಗಳು ವ್ಯವಸಾಯ ಇನ್ನಿತರೆಡೆ ಮನಸ್ಸು ಮಾಡುತ್ತಾರೆ. ಅವರಿಗೆ ಮಾರ್ಗದರ್ಶನ ಮತ್ತು ಪ್ರೋತ್ಸಾಹದ ಅವಶ್ಯಕತೆ ಇದೆ. ಪೊಲೀಸ್ ಇಲಾಖೆಗೆ ಸೇರ್ಪಡೆಗೊಳಿಸುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ಜೊತೆಗೆ ಆರ್ಥಿಕವಾಗಿ ತೊಂದರೆಗೊಳಗಾಗಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ನಲ್ಲಿ ನಮ್ಮ ಕಚೇರಿಯಲ್ಲಿ ಅರ್ಜಿ ಹಾಕಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು. ಮುಂದಿನ ದಿನಗಳಲ್ಲಿ ಪಿಡಿಒ ಹುದ್ದೆ ಸೇರಿದಂತೆ ಟಿಇಟಿ, ಸಿಇಟಿ, ಕೆಎಎಸ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ನೊಂದಣಿಯ ಅಗತ್ಯತೆಗೆ ಅನುಗುಣವಾಗಿ ನುರಿತ ತರಬೇತುದಾರರಿಂದ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಶಿವಮೂರ್ತಿ, ಮಾಜಿ ಸದಸ್ಯ  ನಾಗೇಂದ್ರ ಬಾಬು, ಮುಖಂಡರಾದ ರಾಜಶೇಖರ್ ಮೂರ್ತಿ, ಜೆಸ್ಸಿo ಪಾಷಾ, ಗ್ರಾಪಂ ಸದಸ್ಯ ಡಿ.ಕೆ. ರಾಜು,ಪಪಂ ಸದಸ್ಯ ಆನಂದ್ ಕುಮಾರ್ ಇನ್ನಿತರರು ಹಾಜರಿದ್ದರು.

andolanait

Recent Posts

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

4 mins ago

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

11 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

13 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

13 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

13 hours ago