ಜಿಲ್ಲೆಗಳು

ರೋಹಿಣಿ ಮೇಲಿನ ದೂರು ಹಿಂಪಡೆಯಲ್ಲ: ಸಾ.ರಾ ಸ್ಪಷ್ಟನೆ

ಕೆ.ಆರ್.ನಗರ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ನನ್ನ ಮೇಲೆ ಮಾಡಿದ ಆರೋಪಗಳು ಸಾಬೀತಾಗದೆ ಇದ್ದುದ್ದರಿಂದ ಅವರು ನನ್ನ ಬಳಿ ಕ್ಷಮೆ ಕೇಳಿದ್ದಾರೆ. ಆದರೆ, ನಾನು ಅವರ ಮೇಲೆ ನೀಡಿರುವ ದೂರುಗಳನ್ನು ವಾಪಸ್ ಪಡೆಯುವುದಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.
ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಅವರಣದಲ್ಲಿ ರಾಜ್ಯ ಸರ್ಕಾರದ ಡಾ.ಬಿ.ಸಿ.ರಾಯ್‌ ಪ್ರಶಸ್ತಿಗೆ ಭಾಜನರಾದ ಪ್ರಸೂತಿ ತಜ್ಞೆ ಡಾ.ಕೆ.ಆರ್.ಚಂದ್ರಕಲಾ ಅವರನ್ನು ಸನ್ಮಾನಿಸಿ ನಂತರ ಸುದ್ದಿಗಾರರ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು.

ಸರ್ಕಾರಿ ಅಧಿಕಾರ ಯಂತ್ರವನ್ನು ದುರುಪಯೋಗ ಮಾಡಿಕೊಂಡು ಯಾವುದೇ ಸಾಕ್ಷ್ಯಾಧಾರವಿಲ್ಲದೇ ಜನಪ್ರತಿನಿಧಿಯ ಮೇಲೆ ಆರೋಪ ಮಾಡಿ, ಕೆಸರೆರೆಚುವ ಕೆಲಸ ಮಾಡಿದ್ದು, ನನಗೆ ಮಾನಸಿಕವಾಗಿ ತೊಂದರೆ ನೀಡಿದ್ದಾರೆ. ಈ ಬಗ್ಗೆ ನಾನು ಶಾಸಕನಾಗಿ ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಮುಂದೆ ಬೇಸರ ವ್ಯಕ್ತಪಡಿಸಿದ್ದೇನೆಯೇ ಹೊರತು ಯಾರಿಗೂ ತೊಂದರೆ ನೀಡಬೇಕೆಂಬ ಉದ್ದೇಶದಿಂದ ಅಲ್ಲ ಎಂದು ತಿಳಿಸಿದರು.
ರೋಹಿಣಿ ಸಿಂಧೂರಿ ವಿರುದ್ಧ ನಾನು ಸಾಕ್ಷಿ ಸಮೇತ ಭ್ರಷ್ಟಾಚಾರದ ಆರೋಪ ಮಾಡಿ ದೂರು ನೀಡಿದ್ದು 8 ತಿಂಗಳಾದ ಮೇಲೆ ವರದಿ ಬಂದಿದೆ. ಆದರೆ ಅವರ ಆರೋಪದ ತನಿಖೆ ವರದಿ ಕೇವಲ ಎರಡು ತಿಂಗಳಲ್ಲಿ ಬರುತ್ತದೆ ಎಂದರೆ ಅಧಿಕಾರ ಯಂತ್ರ ಹೇಗಿದೆ ಎಂಬುದು ತಿಳಿಯುತ್ತದೆ. ಅಲ್ಲದೇ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಿದರು ಕೂಡ ನಾನು ಅವರ ಮೇಲಿನ ದೂರನ್ನು ವಾಪಸ್ ಪಡೆಯುವುದಿಲ್ಲ. ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೋ ನೋಡೋಣ ಎಂದು ನುಡಿದರು.

ಪುರಸಭಾ ಸದಸ್ಯರಾದ ಕೆ.ಎಲ್.ಜಗದೀಶ್, ಸಂತೋಷ್‌ಗೌಡ, ಉಮೇಶ್, ಮಾಜಿ ಅಧ್ಯಕ್ಷ ಡಿ.ಕಾಂತರಾಜ್, ಗ್ರಾಪಂ ಮಾಜಿ ಸದಸ್ಯ ಹೋಟೆಲ್ ಮಹದೇವ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಜೆ.ಅರುಣ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಹೇಂದ್ರಪ್ಪ,, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ವಿ.ರಮೇಶ್, ಆಸ್ಪತ್ರೆಯ ರಕ್ಷಾ ಸಮಿತಿ ಸದಸ್ಯರಾದ ಹೆಚ್.ಜಿ.ಮಂಜು, ಸಾ.ರಾ.ನಾಗೇಶ್, ಇನ್ನಿತರರು ಹಾಜರಿದ್ದರು.

 

andolanait

Recent Posts

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

23 mins ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

3 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

8 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

8 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

8 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

8 hours ago