ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಬರಗಿ ಗ್ರಾಮದಲ್ಲಿ ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್ ತಂತಿ ಬೇಲಿಯನ್ನು ಸ್ಪರ್ಶಿಸಿ ಹೆಣ್ಣು ಕಾಡಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಸದ್ಯ ಅರಣ್ಯ ಅಧಿಕಾರಿಗಳು ಹಾಗೂ ಪಶುವೈದ್ಯರು ಯಶಸ್ವಿಯಾಗಿ ಹೆಣ್ಣು ಕಾಡಾನೆಯನ್ನು ರಕ್ಷಿಸಿದ್ದಾರೆ. ಬಂಡೀಪುರ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಟ್ವೀಟ್ ಮಾಡವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ 25ರಿಂದ 30 ವರ್ಷ ವಯಸ್ಸಿನ ಹೆಣ್ಣಾನೆಗೆ ವೈದ್ಯರಿಂದ ನಿರಂತರ ಚಿಕಿತ್ಸೆ ನೀಡಲಾಗಿದ್ದು ಗುಣಮುಖವಾಗಿದೆ. ಸದ್ಯ ಅಧಿಕಾರಿಗಳು ಮತ್ತೆ ಕಾಡಿಗೆ ವಾಪಸ್ ಕಳಿಸಿದ್ದಾರೆ. ಬಂಡೀಪುರ ಅರಣ್ಯಾಧಿಕಾರಿಗಳ ಕಾರ್ಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ಸೂಚಿಸಿದ್ದು ಅರಣ್ಯ ಸಚಿವರ ಟ್ವೀಟ್ನ್ನು ರೀ ಟ್ವೀಟ್ ಮಾಡಿದ್ದಾರೆ.
ನಾಗಪಟ್ಟಣ ಗ್ರಾಮದ ಪುತ್ರನಪುರರಾಜು ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಲಾಗಿತ್ತು. ಈ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಹೆಣ್ಣಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಮಂಗಳವಾರ ಬೆಳಿಗ್ಗೆ ಹೆಣ್ಣಾನೆ ಜಮೀನಿನಲ್ಲಿ ಬಿದ್ದು ನರಳಾಡುತ್ತಿರುವ ವಿಷಯ ತಿಳಿದು ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಕಾಡಾನೆಯನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು ಪಶುವೈದ್ಯ ಡಾ.ವಾಸೀಂ ಮಿರ್ಜಾ ಅವರು ಹೆಣ್ಣಾನೆಗೆ ಚಿಕಿತ್ಸೆ ನೀಡಿದ್ದರು. ಚೇತರಿಕೆ ಕಂಡ ಬಳಿಕ ಜೆಸಿಬಿ ಸಹಾಯದಿಂದ ಆನೆಯನ್ನು ಎದ್ದು ನಿಲ್ಲಿಸಲಾಯಿತು. ಆನೆಯ ಪ್ರಾಣಕ್ಕೆ ಅಪಾಯ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…
ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…