ಜಿಲ್ಲೆಗಳು

ವಿದ್ಯುತ್‌ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದ ಕಾಡಾನೆ ರಕ್ಷಣೆ: ಬಂಡೀಪುರ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ  ಓಂಕಾರ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಬರಗಿ ಗ್ರಾಮದಲ್ಲಿ ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್‌ ತಂತಿ ಬೇಲಿಯನ್ನು ಸ್ಪ‍ರ್ಶಿಸಿ ಹೆಣ್ಣು ಕಾಡಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಸದ್ಯ ಅರಣ್ಯ ಅಧಿಕಾರಿಗಳು ಹಾಗೂ ಪಶುವೈದ್ಯರು ಯಶಸ್ವಿಯಾಗಿ ಹೆಣ್ಣು ಕಾಡಾನೆಯನ್ನು ರಕ್ಷಿಸಿದ್ದಾರೆ. ಬಂಡೀಪುರ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಟ್ವೀಟ್ ಮಾಡವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ 25ರಿಂದ 30 ವರ್ಷ ವಯಸ್ಸಿನ ಹೆಣ್ಣಾನೆಗೆ ವೈದ್ಯರಿಂದ ನಿರಂತರ ಚಿಕಿತ್ಸೆ ನೀಡಲಾಗಿದ್ದು ಗುಣಮುಖವಾಗಿದೆ. ಸದ್ಯ ಅಧಿಕಾರಿಗಳು ಮತ್ತೆ ಕಾಡಿಗೆ ವಾಪಸ್‌ ಕಳಿಸಿದ್ದಾರೆ. ಬಂಡೀಪುರ ಅರಣ್ಯಾಧಿಕಾರಿಗಳ ಕಾರ್ಯಕ್ಕೆ ಪ್ರಧಾನಿ‌ ಮೋದಿ ಮೆಚ್ಚುಗೆ ಸೂಚಿಸಿದ್ದು ಅರಣ್ಯ ಸಚಿವರ ಟ್ವೀಟ್​ನ್ನು ರೀ ಟ್ವೀಟ್ ಮಾಡಿದ್ದಾರೆ.

ನಾಗಪಟ್ಟಣ ಗ್ರಾಮದ ಪುತ್ರನಪುರರಾಜು ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಲಾಗಿತ್ತು. ಈ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಹೆಣ್ಣಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಮಂಗಳವಾರ ಬೆಳಿಗ್ಗೆ ಹೆಣ್ಣಾನೆ ಜಮೀನಿನಲ್ಲಿ ಬಿದ್ದು ನರಳಾಡುತ್ತಿರುವ ವಿಷಯ ತಿಳಿದು ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಕಾಡಾನೆಯನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು ಪಶುವೈದ್ಯ ಡಾ.ವಾಸೀಂ ಮಿರ್ಜಾ ಅವರು ಹೆಣ್ಣಾನೆಗೆ ಚಿಕಿತ್ಸೆ ನೀಡಿದ್ದರು. ಚೇತರಿಕೆ ಕಂಡ ಬಳಿಕ ಜೆಸಿಬಿ ಸಹಾಯದಿಂದ ಆನೆಯನ್ನು ಎದ್ದು ನಿಲ್ಲಿಸಲಾಯಿತು. ಆನೆಯ ಪ್ರಾಣಕ್ಕೆ ಅಪಾಯ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

andolanait

Recent Posts

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

1 hour ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

4 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

9 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

9 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

9 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

9 hours ago