ಮೈಸೂರು: ಮೈಸೂರು ಜಿಲ್ಲಾ ವಕೀಲರ ಸಂಘದ ವತಿಯಿಂದ ಗುರುವಾರ ಜಿಲ್ಲಾ ನ್ಯಾಯಾಲಯದ ನೂತನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ.ಎಸ್.ಸಂಗ್ರೇಶಿ ಅವರನ್ನು ಅಭಿನಂದಿಸಲಾಯಿತು.
ನ್ಯಾಯಾಲಯದ ಹಳೇ ಕಟ್ಟಡದಲ್ಲಿರುವ ಸಂಘದ ಸಭಾಂಗಣದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಗ್ರೇಶಿ ಅವರು, ಲೋಕ ಅದಾಲತ್‌ನಲ್ಲಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಮೈಸೂರು ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಪಡೆದಿದೆ. ಇದೇ ಸ್ಥಾನವನ್ನು ಯಾವಾಗಲೂ ಕಾಯ್ದುಕೊಳ್ಳಬೇಕು. ಕೌಟುಂಬಿಕ ನ್ಯಾಯಾಲಯಕ್ಕೆ ಬರುವ ಪ್ರಕರಣಗಳು ಬಹಳ ಜಿದ್ದಾಜಿದ್ದಿಯಾಗಿರುತ್ತವೆ. ಇಂತಹ ಉಳಿಕೆ ಪ್ರಕರಣಗಳಲ್ಲಿ ಎಷ್ಟರ ಮಟ್ಟಿಗೆ ವಕೀಲರ ಸಹಕಾರ ಇರುತ್ತದೋ ಅಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವರಾಜ ಭೂತೆ, ವಕೀಲರ ಸಂಘದ ಉಪಾಧ್ಯಕ್ಷ ಪುಟ್ಟಸಿದ್ದೇಗೌಡ, ಕಾರ್ಯದರ್ಶಿ ಉಮೇಶ್‌ಕುಮಾರ್ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.





