ಜಿಲ್ಲೆಗಳು

ಸಿದ್ದು ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರವಾಗಿದ್ದರೆ ಬಿಜೆಪಿ ಬಯಲಿಗೆಳೆಯಲಿ : ಧ್ರುವ ಸವಾಲು

ಹನೂರು: ನಿಮಗೆ ಧೈರ್ಯವಿದ್ದರೆ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ನಿಮ್ಮದೇ ಸರ್ಕಾರವಿದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ವಾಗಿದ್ದರೆ ಅದನ್ನು ಬಯಲಿಗೆಳೆಯಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಸರ್ಕಾರಕ್ಕೆ ಸವಾಲೆಸೆದರು.
ಹನೂರು ಪಟ್ಟಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು ರಾಜ್ಯದ ಬಿಜೆಪಿ ಭ್ರಷ್ಟ ಸರ್ಕಾರ ಪ್ರತಿಯೊಂದು ಕಾಮಗಾರಿಗೆ 40%ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ದೂರು ನೀಡಿದ್ದಾರೆ . ಇದಲ್ಲದೆ ಪತ್ರಿಕಾಗೋಷ್ಠಿ ಕರೆದು ನೇರವಾಗಿ ಆರೋಪ ಮಾಡಿದ್ದಾರೆ. ಕೆಂಪಣ್ಣ ಯಾವ ರಾಜಕೀಯ ಪಕ್ಷಕ್ಕೂ ಸೇರಿದವರಲ್ಲ,ಇದಲ್ಲದೆ ಪಿಎಸ್ಸೈ ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಜೈಲಿನಲ್ಲಿದ್ದಾರೆ,ಪ್ರಾಧ್ಯಾಪಕರ ಆಯ್ಕೆಯಲ್ಲಿ ಕುಲಪತಿಗಳು ಜೈಲಿನಲ್ಲಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಸಂಸದ ಪ್ರತಾಪ್ ಸಿಂಹ ರವರು ಭ್ರಮಾ ಲೋಕದಲ್ಲಿದ್ದಾರೆ. ಬಿಜೆಪಿ ಪಕ್ಷದವರು ಅಭಿವೃದ್ಧಿಯ ಬಗ್ಗೆ ಬೆಳಕು ಚೆಲ್ಲುತ್ತಿಲ್ಲ, ಅವರು ನೀಡಿರುವ ಹೊಸ ಯೋಜನೆಗಳ ಬಗ್ಗೆ ಎಲ್ಲಿಯೂ ಮಾತನಾಡುತ್ತಿಲ್ಲ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 3ವರ್ಷವಾಗಿದೆ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ 8 ವರ್ಷವಾಗಿದೆ ಜನಸಾಮಾನ್ಯರಿಗೆ ಯಾವುದೇ ಉತ್ತಮ ಕಾರ್ಯಕ್ರಮ ನೀಡಿಲ್ಲ ಎಂದು ವ್ಯಂಗ್ಯವಾಡಿದರು.
ಬಿಜೆಪಿಯವರು ಕೇವಲ ಧರ್ಮ ಆಧಾರಿತವಾಗಿ ಜನರ ಮನವೊಲಿಸುವಲ್ಲಿ ಸಂಚು ರೂಪಿಸಿದ್ದಾರೆ. ಸಚಿವರಾಗಿದ್ದ ಈಶ್ವರಪ್ಪ ಹಾಗೂ ಅಬಕಾರಿ ಸಚಿವರಾಗಿದ್ದ ರಾಜೇಶ್ ಅವರು ಭ್ರಷ್ಟಾಚಾರ ಆರೋಪದಡಿ ರಾಜಿನಾಮೆ ನೀಡಿದ್ದಾರೆ.ಒಟ್ಟಾರೆ ಹಿಂದೆಂದೂ ಕಾಣದ ರೀತಿಯಲ್ಲಿ ಸರ್ಕಾರ ಭ್ರಷ್ಟ ಸರ್ಕಾರವಾಗಿದೆ, ಮುಂದಿನ ದಿನಗಳಲ್ಲಿ ಬಿಜೆಪಿಯವರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

andolanait

Recent Posts

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

42 mins ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

48 mins ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

58 mins ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

1 hour ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

1 hour ago

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

2 hours ago