ಹನೂರು :ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರ ದೊಡ್ಡಿ ಗ್ರಾಮದ 20ಕ್ಕೂ ಹೆಚ್ಚು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಹಿಂದುಳಿದ ವರ್ಗಗಳ ಮೋರ್ಚ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಜನ ಧ್ವನಿ ಬಿ ವೆಂಕಟೇಶ್ ಮಾತನಾಡಿ ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ಮಾಟಳ್ಳಿ ಗ್ರಾಮದಲ್ಲಿ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರವನ್ನು ತೆರೆದು ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಅನುಕೂಲ ಕಲ್ಪಿಸಲಾಗಿತ್ತು. ಆಟಿಕೆಗಳು ಗೃಹಪಯೋಗಿ ವಸ್ತುಗಳು ಬ್ಯಾಗ್ ಸೇರಿದಂತೆ ವಿವಿಧ ಪದಾರ್ಥಗಳನ್ನು ತಯಾರಿಕೆ ಮಾಡುವುದನ್ನು ಕಲಿಕಾ ಕೇಂದ್ರದಲ್ಲಿ ಕಲಿತುಕೊಂಡು, ಆರ್ಥಿಕವಾಗಿ ಸಬಲರಾಗುತ್ತಿದ್ದರು ಇದರಿಂದ ಪ್ರೇರೇಪಿತರಾದ ಇತರ ಮಹಿಳಾ ಸ್ವಸಹಾಯ ಸಂಘದ ಸದಸ್ಯರುಗಳು ನಮ್ಮ ಕಾರ್ಯ ವೈಖರಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಮೆಚ್ಚಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂತಸದ ವಿಚಾರ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮೀನಾ ಸೇರಿದಂತೆ ಇನ್ನಿತರರು ಹಾಜರಿದ್ದರು
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…