ಹನೂರು: ಕ್ಷೇತ್ರ ವ್ಯಾಪ್ತಿಯ ಎಲ್ಲೇಮಾಳ ಗ್ರಾಮದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಹದೇವ ಜೆಡಿಎಸ್ ಸೇರ್ಪಡೆಯಾಗಿರುವುದು ಸಂತಸದ ವಿಚಾರ ಎಂದು ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ತಿಳಿಸಿದರು.ತಾಲ್ಲೂಕಿನ ಎಲ್ಲೆಮಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಮನೆತನಗಳ ಆಡಳಿತಕ್ಕೆ ಬೇಸತ್ತು ಈ ಬಾರಿ ಪ್ರಜ್ಞಾವಂತ ಮತದಾರರು ಜೆಡಿಎಸ್ ಬೆಂಬಲಿಸಲಿದ್ದಾರೆ. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಲಿ ಶಾಸಕ ನರೇಂದ್ರ ಕಾರ್ಯವೈಖರಿಗೆ ಬೇಸತ್ತು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಗೆ ಮೆಚ್ಚಿ ನೂರಾರು ಕಾರ್ಯಕರ್ತರು ಇತರೆ ಪಕ್ಷಗಳಿಂದ ಜೆಡಿಎಸ್ ಸೇರ್ಪಡೆಯಾಗುತ್ತಿರುವುದರಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಆನಂದ್,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಮೂರ್ತಿ ಮುಖಂಡರುಗಳಾದ ಮಂಜೇಶ್, ರಾಜು, ಕೌಸರ್ ಪಾಷ,ಚಿನ್ನ ವೆಂಕಟ, ಬರ್ಕತ್, ಹಾಗೂ ಇನ್ನಿತರರು ಹಾಜರಿದ್ದರು