ಹನೂರು: ನಿಮ್ಮ ಆಶೀರ್ವಾದದಿಂದ ಸತತ 3 ಬಾರಿ ಜಯಗಳಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ಎಐಸಿಸಿ ಆದೇಶದ ಮೇರೆಗೆ ಕೆಪಿಸಿಸಿ ವತಿಯಿಂದ ಅಭ್ಯರ್ಥಿಗಳ ಆಯ್ಕೆಗೆ ಕರೆಯಲಾಗಿದ್ದ ಅರ್ಜಿ ಸಂಬಂಧ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ನಾನು ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲಿ ಪರಾಭವಗೊಂಡರು ಸಹ ಕಾರ್ಯಕರ್ತರ ಸಹಕಾರ,ಪರಿಶ್ರಮದಿಂದ ಸತತ 3 ಬಾರಿ ಶಾಸಕನಾಗಿದ್ದೇನೆ. ಹನೂರು ವಿಧಾನಸಭಾ ಕ್ಷೇತ್ರದ ಮತದಾರರು ನಮ್ಮ ಕುಟುಂಬದ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ನಾನು ಸದಾ ಆಭಾರಿ. ಕಳೆದ14 ವರ್ಷಗಳಲ್ಲಿ ಶಾಸಕನಾಗಿ ಕ್ಷೇತ್ರಕ್ಕೆ 5 ಸಾವಿರ ಕೋಟಿಗೂ ಹೆಚ್ಚು ಅನುದಾನ ತಂದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಈ ಕ್ಷೇತ್ರದ ಪ್ರಮುಖ ಗುಂಡಾಲ್ ಜಲಾಶಯ ರಾಮನಗುಡ್ಡ ಹುಬ್ಬೆ ಹುಣಸೆ ಜಲಾಶಯ ಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಈ ಯೋಜನೆಯಿಂದ ರೈತರು ಸಾವಿರಾರು ಎಕರೆಯಲ್ಲಿ ವ್ಯವಸಾಯ ಮಾಡಬಹುದು. ಇದಲ್ಲದೆ 135 ಕೋಟಿ ವೆಚ್ಚದಲ್ಲಿ ಉಡುತೊರೆ ಜಲಾಶಯಕ್ಕೆ ಹಾಗೂ ಮಾರ್ಟಳ್ಳಿ ಕೆರೆ 19 ಕೋಟಿ ವೆಚ್ಚದಲ್ಲಿ ಗೋಪಿನಾಥಮ್ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸುವ ಯೋಜನೆಗೆ ಕ್ರಿಯಾಯೋಜನೆ ತಯಾರಿಸಲಾಗಿದೆ.
ದಿನ್ನಳ್ಳಿ ಗ್ರಾಪಂ ಅಧ್ಯಕ್ಷ ಮುರುಗೇಶ್ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಸಂಘಟನೆ ಬಲವರ್ಧನೆ ಯಾಗಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಮನೆ ಮನೆಗೆ ತಲುಪಿಸಿ, ಕಾಂಗ್ರೆಸ್ ಪಕ್ಷ ಅಧಿಕಾರ ದಲ್ಲಿದ್ದ ಸಂದರ್ಭದಲ್ಲಿ ನೀಡಿದ ಕಾರ್ಯಕ್ರಮಗಳನ್ನು ಮನವರಿಕೆ ಮಾಡಿ ಸಂಘಟನೆ ಮಾಡಲು ನಿಮ್ಮ ಸಹಕಾರ ಅಗತ್ಯ, ನೀವು ಮುಂದಿನ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿ ಕ್ಯಾಬಿನೆಟ್ ಸಚಿವರ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಕಾರ್ಯಕರ್ತರು ಸದಾ ನಿಮ್ಮ ಬೆಂಬಲಕ್ಕಿದ್ದೇವೆ , ನಾವು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಿಮ್ಮ ಪರ ಹೊರತು ಎಂದಿಗೂ ಹಣಕ್ಕೆ ಹೆಂಡಕ್ಕೆ ಬೆಲೆ ನೀಡುವುದಿಲ್ಲ ಎಂದು ತಿಳಿಸಿದರು.
ವಿವಿಧ ಸಮುದಾಯದ ಮುಖಂಡರುಗಳು ಶಾಸಕ ಆರ್ ನರೇಂದ್ರ ಅವರ ಪರ ಅಭಿಪ್ರಾಯ ಮಂಡಿಸಿದರು.
ಸಭೆಯಲ್ಲಿ ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಕಾರ್ಯದರ್ಶಿ ಉದ್ದನೂರು ಸಿದ್ದರಾಜು,ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯ ಹರೀಶ್ ,ಚಾಮುಲ್ ಸದಸ್ಯರುಗಳಾದ ನಂಜುಂಡಸ್ವಾಮಿ, ಶಾಹುಲ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜವಾದ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್,ಗುಂಡಾಪುರ ಮಾದೇಶ್, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ,ಹಿರಿಯ ಮುಖಂಡರುಗಳಾದ ವೆಂಕಟರಮಣನಾಯ್ಡು ಚಿಕ್ಕತಮ್ಮಯ್ಯ, ಮಧುವನಹಳ್ಳಿ ಶಿವಕುಮಾರ್,ಪಾಳ್ಯ ಕೃಷ್ಣ ,ಅಜ್ಜೀಪುರ ನಾಗರಾಜು,ಮಾದೇಶ್, ಶಿವು,ತಂಬಿ, ನಟರಾಜು,ಅಶೋಕ್,ರವಿ ಕಂಡ್ಯಯನಪಾಳ್ಯ ಮಾದೇಶ್, ಅಂಕರಾಜು, ಮಂಗಲ ಪುಟ್ಟರಾಜು ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.
ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…
ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…