ಜಿಲ್ಲೆಗಳು

ಚುನಾವಣೆ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ

ಹನೂರು: ನಿಮ್ಮ ಆಶೀರ್ವಾದದಿಂದ ಸತತ 3 ಬಾರಿ ಜಯಗಳಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ಎಐಸಿಸಿ ಆದೇಶದ ಮೇರೆಗೆ ಕೆಪಿಸಿಸಿ ವತಿಯಿಂದ ಅಭ್ಯರ್ಥಿಗಳ ಆಯ್ಕೆಗೆ ಕರೆಯಲಾಗಿದ್ದ ಅರ್ಜಿ ಸಂಬಂಧ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ನಾನು ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲಿ ಪರಾಭವಗೊಂಡರು ಸಹ ಕಾರ್ಯಕರ್ತರ ಸಹಕಾರ,ಪರಿಶ್ರಮದಿಂದ ಸತತ 3 ಬಾರಿ ಶಾಸಕನಾಗಿದ್ದೇನೆ. ಹನೂರು ವಿಧಾನಸಭಾ ಕ್ಷೇತ್ರದ ಮತದಾರರು ನಮ್ಮ ಕುಟುಂಬದ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ನಾನು ಸದಾ ಆಭಾರಿ. ಕಳೆದ14 ವರ್ಷಗಳಲ್ಲಿ ಶಾಸಕನಾಗಿ ಕ್ಷೇತ್ರಕ್ಕೆ 5 ಸಾವಿರ ಕೋಟಿಗೂ ಹೆಚ್ಚು ಅನುದಾನ ತಂದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಈ ಕ್ಷೇತ್ರದ ಪ್ರಮುಖ ಗುಂಡಾಲ್ ಜಲಾಶಯ ರಾಮನಗುಡ್ಡ ಹುಬ್ಬೆ ಹುಣಸೆ ಜಲಾಶಯ ಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಈ ಯೋಜನೆಯಿಂದ ರೈತರು ಸಾವಿರಾರು ಎಕರೆಯಲ್ಲಿ ವ್ಯವಸಾಯ ಮಾಡಬಹುದು. ಇದಲ್ಲದೆ 135 ಕೋಟಿ ವೆಚ್ಚದಲ್ಲಿ ಉಡುತೊರೆ ಜಲಾಶಯಕ್ಕೆ ಹಾಗೂ ಮಾರ್ಟಳ್ಳಿ ಕೆರೆ 19 ಕೋಟಿ ವೆಚ್ಚದಲ್ಲಿ ಗೋಪಿನಾಥಮ್ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸುವ ಯೋಜನೆಗೆ ಕ್ರಿಯಾಯೋಜನೆ ತಯಾರಿಸಲಾಗಿದೆ.

ಮೊದಲ ಹಂತದಲ್ಲಿ 100ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು ಮುಂದಿನ ತಿಂಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಉದ್ಘಾಟಿಸಿದ ನಂತರ ಹಳ್ಳಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಸಿಗಲಿದೆ. ಎರಡನೇ ಹಂತದಲ್ಲಿ 140 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ ಗೆ ಕ್ರಿಯಾಯೋಜನೆ ತಯಾರಿಸಲಾಗಿ ಟೆಂಡರ್ ಹಂತದಲ್ಲಿದೆ ಎಂದು ತಿಳಿಸಿದರು.

ಜಿಪಂ ಮಾಜಿ ಉಪಾಧ್ಯಕ್ಷ ರಾಮಾಪುರ ಬಸವರಾಜು ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆ ನಿಮ್ಮನ್ನು ಹೊರತುಪಡಿಸಿ ಯಾರೊಬ್ಬರೂ ಅರ್ಜಿ ಸಲ್ಲಿಸುವುದಿಲ್ಲ ನೀವು ನಾಲ್ಕನೆ ಬಾರಿ ಶಾಸಕರಾಗುವುದು ಖಚಿತ. ನೀವು ಅರ್ಜಿ ಸಲ್ಲಿಸಿ ನಿಮ್ಮ ಅಭಿವದ್ಧಿ ಕಾಮಗಾರಿಗಳು ಹೀಗೆ ಮುಂದುವರಿಯಲಿ ಎಂದು ತಿಳಿಸಿದರು.

ದಿನ್ನಳ್ಳಿ ಗ್ರಾಪಂ ಅಧ್ಯಕ್ಷ ಮುರುಗೇಶ್ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಸಂಘಟನೆ ಬಲವರ್ಧನೆ ಯಾಗಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಮನೆ ಮನೆಗೆ ತಲುಪಿಸಿ, ಕಾಂಗ್ರೆಸ್ ಪಕ್ಷ ಅಧಿಕಾರ ದಲ್ಲಿದ್ದ ಸಂದರ್ಭದಲ್ಲಿ ನೀಡಿದ ಕಾರ್ಯಕ್ರಮಗಳನ್ನು ಮನವರಿಕೆ ಮಾಡಿ ಸಂಘಟನೆ ಮಾಡಲು ನಿಮ್ಮ ಸಹಕಾರ ಅಗತ್ಯ, ನೀವು ಮುಂದಿನ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿ ಕ್ಯಾಬಿನೆಟ್ ಸಚಿವರ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಕಾರ್ಯಕರ್ತರು ಸದಾ ನಿಮ್ಮ ಬೆಂಬಲಕ್ಕಿದ್ದೇವೆ , ನಾವು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಿಮ್ಮ ಪರ ಹೊರತು ಎಂದಿಗೂ ಹಣಕ್ಕೆ ಹೆಂಡಕ್ಕೆ ಬೆಲೆ ನೀಡುವುದಿಲ್ಲ ಎಂದು ತಿಳಿಸಿದರು.

ವಿವಿಧ ಸಮುದಾಯದ ಮುಖಂಡರುಗಳು ಶಾಸಕ ಆರ್ ನರೇಂದ್ರ ಅವರ ಪರ ಅಭಿಪ್ರಾಯ ಮಂಡಿಸಿದರು.

ಸಭೆಯಲ್ಲಿ ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಕಾರ್ಯದರ್ಶಿ ಉದ್ದನೂರು ಸಿದ್ದರಾಜು,ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯ ಹರೀಶ್ ,ಚಾಮುಲ್ ಸದಸ್ಯರುಗಳಾದ ನಂಜುಂಡಸ್ವಾಮಿ, ಶಾಹುಲ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜವಾದ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್,ಗುಂಡಾಪುರ ಮಾದೇಶ್, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ,ಹಿರಿಯ ಮುಖಂಡರುಗಳಾದ ವೆಂಕಟರಮಣನಾಯ್ಡು ಚಿಕ್ಕತಮ್ಮಯ್ಯ, ಮಧುವನಹಳ್ಳಿ ಶಿವಕುಮಾರ್,ಪಾಳ್ಯ ಕೃಷ್ಣ ,ಅಜ್ಜೀಪುರ ನಾಗರಾಜು,ಮಾದೇಶ್, ಶಿವು,ತಂಬಿ, ನಟರಾಜು,ಅಶೋಕ್,ರವಿ ಕಂಡ್ಯಯನಪಾಳ್ಯ ಮಾದೇಶ್, ಅಂಕರಾಜು, ಮಂಗಲ ಪುಟ್ಟರಾಜು ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.

andolanait

Recent Posts

ಮಂಡ್ಯ | ಕೆರೆಯಲ್ಲಿ ಬಾಲಕನ ಶವ ಪತ್ತೆ ; ಕೊಲೆ ಶಂಕೆ

ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ…

9 hours ago

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

14 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

16 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

16 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

19 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

23 hours ago