ಹನೂರು: ಬಡವರ ದೀನ ದಲಿತರ ಏಳಿಗೆಗೆ ಶ್ರಮಿಸಿದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿ .ಇಂದಿರಾ ಗಾಂಧಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾಜಿ ಪ್ರಧಾನಿ ದಿ ಇಂದಿರಾ ಗಾಂಧಿರವರ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ ಆರ್ಥಿಕ ನೀತಿಯಿಂದ ಭಾರತ ಇಂದು ಸುಭದ್ರವಾದ ನೆಲೆಗಟ್ಟಿನಲ್ಲಿ ನಿಂತಿದೆ. ಪ್ರಜಾಪ್ರಭುತ್ವ, ಸಂವಿಧಾನ ಗಟ್ಟಿಯಾಗಿ ನಿಂತಿರಲು ಹಾಗೂ ಆರ್ಥಿಕವಾಗಿ ಸಾಮಾಜಿಕವಾಗಿ ರಾಜಕೀಯವಾಗಿ ಸುಭದ್ರವಾಗಿದೆ. ಉಳುವವನೇ ಭೂಮಿ ಒಡೆಯ ಕಾಯ್ದೆ ತಂದ ನಂತರ ಲಕ್ಷಾಂತರ ರೈತರು ತಮ್ಮ ಜೀವನ ಕಂಡುಕೊಂಡಿದ್ದಾರೆ. ಹಿಂದೆ ಕೇವಲ ಉಳ್ಳವರಿಗಷ್ಟೇ ಬ್ಯಾಂಕ್ ನಲ್ಲಿ ವ್ಯವಹಾರ ನಡೆಸುವ ಪದ್ದತಿ ಇತ್ತು ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರು ಬ್ಯಾಂಕ್ ರಾಷ್ಟ್ರೀಕರಣ ಮಾಡಿದ ನಂತರ ಎಲ್ಲರಿಗೂ ವ್ಯವಹಾರಿಕವಾಗಿ ಬ್ಯಾಂಕ್ ನಲ್ಲಿ ಅನುಕೂಲವಾಗಿದೆ.ಸಾಮಾಜಿಕ ನ್ಯಾಯದಡಿ ಜೀತಪದ್ಧತಿ ಹೋಗಲಾಡಿಸಿದ ನಂತರ ಲಕ್ಷಾಂತರ ಜನರು ಸ್ವತಂತ್ರ ಬದುಕು ಕಟ್ಟಿಕೊಂಡಿದ್ದಾರೆ ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಸಂತಸ ತಂದಿದೆ: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆರವರು ಆಯ್ಕೆಯಾಗಿರುವುದು ತುಂಬಾ ಸಂತಸದ ವಿಚಾರವಾಗಿದೆ.ಸ್ವಾತಂತ್ರ್ಯಪೂರ್ವ ಹಾಗೂ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಆಡಳಿತಾವಧಿಯಲ್ಲಿ ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಿದೆ ಇಂತಹ ದೊಡ್ಡ ಕಾಂಗ್ರೆಸ್ ಪಕ್ಷಕ್ಕೆ ಮಲ್ಲಿಕಾರ್ಜುನ್ ಖರ್ಗೆ ಅಧ್ಯಕ್ಷರಾಗಿರುವುದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಇವರ ಕೈ ಬಲಪಡಿಸುವ ನಿಟ್ಟಿನಲ್ಲಿ ನಾವು ಪಕ್ಷ ಸಂಘಟನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಹನೂರು ಪಟ್ಟಣದ ನಿವಾಸಿ ಪ್ರಭು ಜೆಡಿಎಸ್ ತೊರೆದು ಶಾಸಕ ಆರ್ ನರೇಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಸೊಳೇರಿಪಾಳ್ಯ ಗ್ರಾಪಂ ಅಧ್ಯಕ್ಷೆ ಸುಧಾ, ಸದಸ್ಯ ಬಸವರಾಜು ಪಟ್ಟಣ ಪಂಚಾಯಿತಿ ಸದಸ್ಯರಾದ ಸಂಪತ್ ಕುಮಾರ್ ಸುದೇಶ್, ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಪ್ರಧಾನ ಕಾರ್ಯದರ್ಶಿ ಉದ್ದನೂರು ಸಿದ್ದರಾಜು ಮುಖಂಡರಾದ ಪೆದ್ದನಪಾಳ್ಯ ಮಣಿ, ಕಾಂಚಳ್ಳಿ ನಟರಾಜು, ಸಿಕಂದರ್ ಪಾಷಾ ಷಣ್ಮುಗ,ಸೋಮಣ್ಣ ರಾಜೇಶ್, ಸೇರಿದಂತೆ ಇನ್ನಿತರರು ಹಾಜರಿದ್ದರು
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…