ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ.
ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮತ್ತೊಬ್ಬ ಅಭ್ಯರ್ಥಿಯಾದ ಶಶಿತರೂರ್ ಅವರು ಕಣದಲ್ಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ನ ಓರ್ವ ವ್ಯಕ್ತಿ ಒಂದು ಹುದ್ದೆ ನೀತಿ ಅನ್ವಯ ಖರ್ಗೆ ತಮ್ಮ ವಿರೋಧ ಪಕ್ಷದ ಮುಖ್ಯಸ್ಥ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಚುನಾವಣೆ ಯಾವಾಗ ?
ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19ರಂದು ಮತ ಎಣಿಕೆಯಾಗಿ ಹೊಸ ಅಧ್ಯಕ್ಷರ ಘೋಷಣೆ ಆಗಲಿದೆ.
ವೇಳಾಪಟ್ಟಿ ಪ್ರಕಾರ ಸೆಪ್ಟೆಂಬರ್ 24ರಿಂದ 30ರವರೆಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ಅಕ್ಟೋಬರ್ 1ರಂದು ನಾಮಪತ್ರ ಪರಿಶೀಲನೆ ಆಗಲಿದ್ದು, ನವೆಂಬರ್ 8ರವರೆಗೂ ನಾಮಪತ್ರ ವಾಪಸ್ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಅಕ್ಟೋಬರ್ 17ರಂದು ಮತದಾನವಾದರೆ, 19ರಂದು ಮತ ಎಣಿಕೆಯಾಗುತ್ತದೆ.