Mysore
28
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

‘ಸಂವಿಧಾನ ಓದು’ ಪುಸ್ತಕ ವಿತರಣೆ

ಸಂವಿಧಾನ ದಿನದ ಅಂಗವಾಗಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾದ ವತಿಯಿಂದ ಅಂಬೇಡ್ಕರ್ ಸರ್ಕಲ್‌ನಲ್ಲಿ ಮೊದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಪ್ರಗತಿ ಪ್ರೌಢಶಾಲೆಯ ಮಕ್ಕಳಿಗೆ ‘ಸಂವಿಧಾನ ಓದು’ ಎಂಬ ಪುಸ್ತಕಗಳನ್ನು ವಿತರಿಸಲಾಯಿತು. ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪರವಾನಂದ, ನಗರ ಕಾರ್ಯದರ್ಶಿ ಎಚ್.ಜಿ.ಗಿರಿಧರ್, ಮಾಜಿ ಮಹಾಪೌರ ಎಸ್.ಸತೀಶ್ ಸ್ವಾಮಿ, ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಪಿ.ಮಂಜುನಾಥ್, ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್, ನರಸಿಂಹರಾಜ ಕ್ಷೇತ್ರದ ಅಧ್ಯಕ್ಷ ಭಾನುಪ್ರಕಾಶ್, ವೇಲು, ಮಣಿ, ಲೋಹಿತ್ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!