ಜಿಲ್ಲೆಗಳು

ಕುವೆಂಪು ಶಾಲೆಗೆ ಜೆ.ಕೆ.ಟೈರ್ಸ್‌ನಿಂದ ಶೌಚಾಲಯ ನಿರ್ಮಾಣ ಭರವಸೆ

ಮೈಸೂರು: ಗಂಗೋತ್ರಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯ ನಿರ್ಮಿಸಿಕೊಡುವಂತೆ ಸಂಸದ ಪ್ರತಾಪ್ ಸಿಂಹ, ಜೆ.ಕೆ.ಟೈರ್ಸ್‌ ಕಂಪೆನಿಗೆ ಮನವಿ ಮಾಡಿದ್ದು, ಕಂಪೆನಿಯ ಮೈಸೂರಿನ ಘಟಕದ ಮುಖ್ಯಸ್ಥರಾದ ಈಶ್ವರ್ ಅವರ ಜೊತೆ ಸ್ಥಳಕ್ಕೆ ಭೇಟಿ ನೀಡಿದ ಸಂಸದರು, ಕಂಪೆನಿಯ ಸಿಎಸ್‌ಆರ್ ನಿಧಿಯಲ್ಲಿ ಕೂಡಲೇ ಹೊಸ ಶೌಚಾಲಯ ನಿರ್ಮಾಣ ಮಾಡುವ ಭರವಸೆ ನೀಡಿದರು.

ಗಂಗೋತ್ರಿ ಶಾಲೆಯಲ್ಲಿ ಒಟ್ಟು 380 ವಿದ್ಯಾರ್ಥಿಗಳಿದ್ದು, ಎರಡು ಶೌಚಾಲಯಗಳು  ಮಾತ್ರ ಇದೆ. ಮೈಸೂರು ವಿಶ್ವವಿದ್ಯಾನಿಲಯದ ಮಹಿಳಾ ಹಾಸ್ಟೆಲ್ ಬ್ಲಾಕ್ ೧ರಲ್ಲಿನ ಶೌಚಾಲಯಗಳು ಸೋರಿಕೆ ಸಮಸ್ಯೆಗಳಿಂದ ಕೂಡಿದೆ. ಈ ಶೌಚಾಲಯಗಳನ್ನು ಪ್ರತಿದಿನ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಳಸುತ್ತಿದ್ದು, ತಕ್ಷಣ ನವೀಕರಣ ಅಗತ್ಯವಿದೆ. ಹಾಸ್ಟೆಲ್‌ಗೆ ಟೇಬಲ್, ಚೇರ್‌ಗಳು ಮತ್ತು ಉತ್ತಮ ಬೆಳಕಿನ ಸೌಲಭ್ಯದೊಂದಿಗೆ ಅಧ್ಯಯನ ಕೊಠಡಿ. ಅಲ್ಲದೇ ಸಂಶೋಧಕರಿಗೆ 60 ಲ್ಯಾಪ್‌ಟಾಪ್‌ಗಳನ್ನು ಒದಗಿಸುವಂತೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.


ಕುವೆಂಪು ಅವರ ಕಾಲದಲ್ಲಿ ಆರಂಭವಾದ ಕುವೆಂಪು ಸ್ಕೂಲ್ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಮಹಿಳಾ ಸಂಶೋಧನಾ ಮತ್ತು ಪಿ.ಜಿ. ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಶೌಚಾಲಯ ಮತ್ತು ಸ್ನಾನಗೃಹ ಕೊರತೆಯಿಂದ ತೀವ್ರ ತೊಂದರೆ ಆಗುತ್ತಿದೆ ಎಂದು ಸಿಂಡಿಕೇಟ್ ಸದಸ್ಯೆ ಡಾ. ಚೈತ್ರಾ ನಾರಾಯಣ್ ರವರು ಸಂಸದ ಪ್ರತಾಪ್ ಸಿಂಹ ಅವರ ಗಮನಕ್ಕೆ ತಂದಿದ್ದರು.

andolanait

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

5 mins ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

1 hour ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

1 hour ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

1 hour ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

2 hours ago