ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ರಿಂಗ್ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಇಂದು ಸಂಸದ ಪ್ರತಾಪ್ ಸಿಂಹ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಮೈಸೂರು ರಿಂಗ್ ರಸ್ತೆಯಲ್ಲಿ ರಸ್ತೆ ಉದ್ದಕ್ಕೂ ಗುಂಡಿ ತೆಗೆದು ಅಂಡರ್ ಗ್ರೌಂಡ್ ಕೇಬಲ್ ಹಾಕಿ, ಎಲ್ ಇ ಡಿ ಬಲ್ಬ್ ಗಳನ್ನು ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು, ಸದರಿ ಕಾಮಗಾರಿಯನ್ನು ಇಂದು ಸಂಸದ ಪ್ರತಾಪ್ ಸಿಂಹ ರವರು ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದ್ದಾರೆ.
ಮೈಸೂರು ರಿಂಗ್ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸುವ ಸಂಬಂಧವಾಗಿ 78 ಕಿ.ಮೀ ಗೆ ಕೇಬಲ್ ಅಳವಡಿಸಲಾಗಿದ್ದು, ಬಾಕಿ ಇರುವ 5 ಕಿ.ಮೀ ಕೇಬಲ್ ಅಳವಡಿಸುವ ಕಾರ್ಯವನ್ನು 3-4 ದಿನಗಳಲ್ಲಿ ಮುಗಿಸಲಾಗುವುದು. (ಒಟ್ಟು 83 ಕಿ.ಮೀ ಎರಡು ಕಡೆ ಸೇರಿದಂತೆ) ಎಂದು ತಿಳಿಸಿದ್ದಾರೆ.
ಮುಂದುವರಿದು ಲೈಟ್ ಗಳನ್ನು ಅಳವಡಿಸುವ ಕಾರ್ಯ ಆರಂಭವಾಗಿದೆ. ನವೆಂಬರ್ 30 ರ ಗಡುವಿನ ಒಳಗಡೆ ಕಾಮಗಾರಿ ಮುಗಿಸಿ ಲೈಟ್ ಗಳನ್ನು ಆನ್ ಮಾಡುವ ಪ್ರಯತ್ನ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.