ಪಾಂಡವಪುರ: ಕಬ್ಬಿನ ತರಗು(ಕಬ್ಬಿನ ಗರಿ) ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗಲಿ ಹುಲ್ಲು ಬೆಂಕಿಗೆ ಆಹುತಿಯಾಗಿರುವ ಘಟನೆ ತಾಲ್ಲೂಕಿನ ಮಡಿಕೆಪಟ್ಟಣ ಗೇಟ್ ಬಳಿ ಸಂಭವಿಸಿದೆ.
ಶುಂಠಿ ಬೆಳೆಗಾಗಿ ಕಬ್ಬಿನ ತರಗನ್ನು ಚಿಕ್ಕಬ್ಯಾಡರಹಳ್ಳಿ ಕಡೆಯಿಂದ ಹುಣಸೂರಿನ ಕಡೆಗೆ ತುಂಬಿಕೊಂಡು ಹೋಗುತ್ತಿದ್ದ ಲಾರಿಯು ಮಡಿಕೆ ಪಟ್ಟಣ ಬಳಿ ಬರುತ್ತಿದ್ದಂತೆಯೇ ರಸ್ತೆ ಮೇಲ್ಬಾಗದಲ್ಲಿ ಅಡ್ಡಲಾಗಿ ಹಾಕಲಾಗಿದ್ದ ವಿದ್ಯುತ್ ತಂತಿಯು ಕಬ್ಬಿನ ತರಗಿಗೆ ಸ್ಪರ್ಶವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಧಗಧಗಿಸುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣವೇ ಅಲ್ಲೇ ಅಂಗಡಿಯ ಬಳಿ ಇದ್ದ ಟ್ಯಾಂಕ್‌ನಿಂದ ನೀರು ತೆಗೆದು ಬೆಂಕಿನಂಧಿಸಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ಅಲ್ಲಿಗೆ ಜೆಸಿಬಿಯ ಸಹಾಯದಿಂದ ಲಾರಿಯಲ್ಲಿ ತುಂಬಿದ್ದ ಎಲ್ಲಾ ಕಬ್ಬಿನ ಗರಿಯನ್ನು ಕೆಳೆಗೆ ಎಳೆಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಸಂಭವಿಸಲಿದ್ದ ಭಾರಿ ಅನಾಹುತವೊಂದು ತಪ್ಪಿದಂತಾಗಿದ್ದು, ವಿದ್ಯುತ್ ಇಲಾಖೆಯ ವಿರುದ್ಧ ಸ್ಥಳೀಯ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…
ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…
ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ…
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…
ಬೀದರ್: ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ…