ಜಿಲ್ಲೆಗಳು

ವಿದ್ಯುತ್ ತಂತಿ ಸ್ಪರ್ಶ : ಲಾರಿಯಲ್ಲಿದ್ದ ತರಗು ಬೆಂಕಿಗಾಹುತಿ

ಪಾಂಡವಪುರ: ಕಬ್ಬಿನ ತರಗು(ಕಬ್ಬಿನ ಗರಿ) ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗಲಿ ಹುಲ್ಲು ಬೆಂಕಿಗೆ ಆಹುತಿಯಾಗಿರುವ ಘಟನೆ ತಾಲ್ಲೂಕಿನ ಮಡಿಕೆಪಟ್ಟಣ ಗೇಟ್ ಬಳಿ ಸಂಭವಿಸಿದೆ.
ಶುಂಠಿ ಬೆಳೆಗಾಗಿ ಕಬ್ಬಿನ ತರಗನ್ನು ಚಿಕ್ಕಬ್ಯಾಡರಹಳ್ಳಿ ಕಡೆಯಿಂದ ಹುಣಸೂರಿನ ಕಡೆಗೆ ತುಂಬಿಕೊಂಡು ಹೋಗುತ್ತಿದ್ದ ಲಾರಿಯು ಮಡಿಕೆ ಪಟ್ಟಣ ಬಳಿ ಬರುತ್ತಿದ್ದಂತೆಯೇ ರಸ್ತೆ ಮೇಲ್ಬಾಗದಲ್ಲಿ ಅಡ್ಡಲಾಗಿ ಹಾಕಲಾಗಿದ್ದ ವಿದ್ಯುತ್ ತಂತಿಯು ಕಬ್ಬಿನ ತರಗಿಗೆ ಸ್ಪರ್ಶವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಧಗಧಗಿಸುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣವೇ ಅಲ್ಲೇ ಅಂಗಡಿಯ ಬಳಿ ಇದ್ದ ಟ್ಯಾಂಕ್‌ನಿಂದ ನೀರು ತೆಗೆದು ಬೆಂಕಿನಂಧಿಸಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ಅಲ್ಲಿಗೆ ಜೆಸಿಬಿಯ ಸಹಾಯದಿಂದ ಲಾರಿಯಲ್ಲಿ ತುಂಬಿದ್ದ ಎಲ್ಲಾ ಕಬ್ಬಿನ ಗರಿಯನ್ನು ಕೆಳೆಗೆ ಎಳೆಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಸಂಭವಿಸಲಿದ್ದ ಭಾರಿ ಅನಾಹುತವೊಂದು ತಪ್ಪಿದಂತಾಗಿದ್ದು, ವಿದ್ಯುತ್ ಇಲಾಖೆಯ ವಿರುದ್ಧ ಸ್ಥಳೀಯ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago