ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ
ಮೈಸೂರು: ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವ ಇದೆ, ವಿವಾದವನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ಹಾಗಾಗಿ ಪ.ಮಲ್ಲೇಶ್ ಅವರು ಬ್ರಾಹ್ಮಣರ ಕುರಿತು ನೀಡಿರುವ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸುವಂತೆ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ.ಮಲ್ಲೇಶ್ ಅವರು ಮೈಸೂರಿನಲ್ಲಿ ನಡೆದ ಸಿದ್ದರಾಮಯ್ಯಅವರ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿಯವರ ಜತೆ ಮಾತನಾಡಿರುವ ಸಿದ್ದರಾಮಯ್ಯ, ಸಮಾಜದಲ್ಲಿನ ಎಲ್ಲ ಸಮುದಾಯಗಳ ಬಗ್ಗೆ ನನಗೆ ಗೌರವವಿದೆ. ಇದುವರೆಗಿನ ರಾಜಕಾರಣದಲ್ಲಿ ನಾನು ಯಾವ ಸಮುದಾಯವನ್ನು ಅಗೌರವದಿಂದ ಕಂಡಿಲ್ಲ, ಮೈಸೂರಿನಲ್ಲಿ ಪ.ಮಲ್ಲೇಶ್ ಹೇಳಿಕೆ ಕುರಿತು ಉಂಟಾಗಿರುವ ವಿವಾದವನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ಇದನ್ನು ಇಲ್ಲಿಗೇ ನಿಲ್ಲಿಸಿ ಎಲ್ಲರೂ ಒಟ್ಟಿಗೆ ಹೋಗಬೇಕಿದೆ. ಇದೇ ಹಿನ್ನೆಲೆಯಲ್ಲಿ ಮಲ್ಲೇಶ್ ಅವರು ತಮ್ಮ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಇನ್ನು ಮುಂದೆ ಯಾವುದೇ ವಿವಾದಗಳಿಗೂ ಅವಕಾಶಮಾಡಿ ಕೊಡುವುದು ಬೇಡ ಎಂದಿದ್ದಾರೆ.
ಮಡಿಕೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಾಳೆಲೆ ಗ್ರಾಮದಲ್ಲಿ ನಡೆದಿದೆ. ಕೃಷ್ಣ(11), ಹಾಗೂ ಗೌತಮ್(21)…
ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ…
ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…