ಜಿಲ್ಲೆಗಳು

ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ತಿದ್ದುಪಡಿ, ಸೇರ್ಪಡೆಗೆ ಅವಕಾಶ : ಎನ್ ಜಯರಾಮ್

ಮೈಸೂರು:  ಕರಡು ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರುಗಳನ್ನು ಪರಿಶೀಲಿಸಿ ಹೆಸರುಗಳ ತಿದ್ದುಪಡಿ, ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಚುನಾವಣಾ ವೀಕ್ಷಕರಾದ ಎನ್ ಜಯರಾಮ್ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮೈಸೂರು ಜಿಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಸಂಬಂಧದಲ್ಲಿ ಅರ್ಹ ಮತದಾರರುಗಳು ಮತದಾರರ ಪಟ್ಟಿಗೆ ಅವರ ಹೆಸರನ್ನು ಚುನಾವಣಾ ಆಯೋಗವು ನಿಗದಿಪಡಿಸುವ ದಿನಾಂಕದವರೆವಿಗೂ ಸೇರ್ಪಡೆಗೊಳ್ಳಲು ಅವಕಾಶವಿರುತ್ತದೆ ಎಂದರು.

ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ರಾಜ್ಯ ಇವರ ಅಧಿಕೃತ ಜಾಲತಾಣ https://ceo.karnataka.gov.in ನಲ್ಲಿ ಲಭ್ಯವಿದ್ದು, ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ ಹಾಗೂ ಸರಿಯಾದ ಹೆಸರನ್ನು ನಮೂದುಗಳೊಂದಿಗೆ ನೋಂದಾಯಿಸಿದ ಬಗ್ಗೆ ಖಚಿತಪಡಿಸಿಕೊಳ್ಳಬಹುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಾದ ಡಾ ಕೆ.ವಿ ರಾಜೇಂದ್ರ ರವರು ಮಾತನಾಡಿ, ಚುನಾವಣಾ ಸಮಯದಲ್ಲಿ ಮತದಾರದ ವಿವರವನ್ನು ಪಡೆದುಕೊಂಡು ಬೇರೆ ರೀತಿಯ ವಂಚನೆಗಳನ್ನು ಮಾಡಬಹುದು. ಆದ್ದರಿಂದ ಚುನಾವಣಾ ಆಯೋಗಕ್ಕೆ ಸಂಬoಧ ಪಟ್ಟವರನ್ನು ಹೊರತು ಪಡಿಸಿ ಬೇರೆ ಯಾರೊಂದಿಗೂ ನಿಮ್ಮ ವಿವರಗಳು ಅಥವಾ ದಾಖಲೆಗಳನ್ನು ಹಂಚಿಕೊಳ್ಳಬೇಡಿ ಎಂದು ತಿಳಿಸಿದರು.

ಮೊದಲಿದ್ದಂತೆ ಅರ್ಹತಾ ದಿನಾಂಕವಾದ ಜನವರಿ 01 ರವರೆಗೂ ಕಾಯಬೇಕಾಗಿಲ್ಲ, 17 ವರ್ಷ ಮೇಲ್ಪಟ್ಟವರಿಗೆ ಮುಂಗಡ ಅರ್ಜಿ ಸಲ್ಲಿಸುವ ಸೌಲಭ್ಯ ಕಲ್ಪಿಸಲಾಗಿದೆ. 2022ರ ಆಗಸ್ಟ್ 1 ರಿಂದ ಮತದಾರರ ನೋಂದಣಿಗಾಗಿ ಹೊಸ ಸರಳೀಕರಿಸಿದ ಅರ್ಜಿ ನಮೂನೆಗಳು, ಮತದಾರರ ಪಟ್ಟಿಯ ಹೆಸರು, ಇನ್ನಿತರ ತಿದ್ದುಪಡಿಗಳಿಗಾಗಿ ಹೊಸ ನಮೂನೆ 8 ಲಭ್ಯವಿದ್ದು, ಮತದಾರರ ಪಟ್ಟಿಗೆ ಸ್ವಯಂಪ್ರೇರಿತ ಆಧಾರ್ ಜೋಡಣೆ ಸೌಲಭ್ಯ, ಒಂದೇ ತರಹದ ಹೆಸರು/ಫೋಟೋ ನಮೂದುಗಳನ್ನು ಹೊಂದಿರುವ ಮತದಾರರ ಪರಿಶೀಲನೆಗೆ ಆದ್ಯತೆ ನೀಡುವುದು ಮತ್ತು ಆರೋಗ್ಯಕರ ಮತದಾರರ ಪಟ್ಟಿಯನ್ನು ಖಾತರಿಪಡಿಸುವ ಉದ್ದೇಶದಿಂದ ಪರಿಶೀಲನೆ ಮತ್ತು ಮೇಲ್ವಿಚಾರಣೆಯನ್ನು ಕೈಗೊಳ್ಳಲಾಗುತ್ತದೆ ಎಂದರು
ಜನತಾ ಪ್ರಾತಿನಿಧ್ಯ ಕಾಯಿದೆ 1950 ರ ಪ್ರಕರಣ 14(ಬಿ) ಮತ್ತು ಮತದಾರರ ನೋಂದಣಿ ನಿಯಮಗಳು 1960 ರಲ್ಲಿ ಸೂಕ್ತ ತಿದ್ದುಪಡಿ ಮಾಡಲಾಗಿದೆ. ಅದರಂತೆ, ಪ್ರಸ್ತುತ ಜಾರಿಯಲ್ಲಿರುವ ಜನವರಿ, 01ರ ಅರ್ಹತಾ ದಿನಾಂಕದ ಜೊತೆಗೆ 01ನೇ ಏಪ್ರಿಲ್, 01ನೇ ಜುಲೈ ಮತ್ತು 01ನೇ ಅಕ್ಟೋಬರ್” ರಂದು ಹೆಸರುಗಳ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಮುಂದೆ ಮತದಾರರ ಪಟ್ಟಿಯನ್ನು ಪ್ರತಿ ತ್ರೈಮಾಸಿಕದಲ್ಲಿ ಕಾಲೋಚಿತಗೊಳಿಸಲಾಗುವುದು. ಇದರಿಂದ ಆಯಾ ತ್ರೈಮಾಸಿಕದಲ್ಲಿ 18 ವರ್ಷ ತುಂಬುವ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಜೊತೆ ಮತದಾರರ ಭಾವಚಿತ್ರದ ಗುರುತಿನ ಚೀಟಿಯನ್ನು ಸಹ ವಿತರಿಸಲಾಗುವುದು. ಪ್ರಸಕ್ತ 2023ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 01ನೇ ಏಪ್ರಿಲ್, 01ನೇ ಜುಲೈ ಮತ್ತು 01ನೇ ಅಕ್ಟೋಬರ್ ಗೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದರಿಂದ 18 ವರ್ಷಗಳನ್ನು ಪೂರೈಸಿದ ಯುವಕರು ನೋಂದಣಿಗಾಗಿ ಮುಂದಿನ ವರ್ಷದ ವಿಶೇಷ ಪರಿಷ್ಕರಣೆವರೆಗೆ ಕಾಯುವುದನ್ನು ತಪ್ಪಿಸಲಾಗಿದೆ. ಮತ್ತು ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗಳಲ್ಲಿ ಮತ ಚಲಾವಣೆಗೆ ಅವಕಾಶ ದೊರೆಯಲಿದೆ ಎಂದರು.

ಈ ಮೊದಲು ಒಂದು ವಿಧಾನಸಭಾ ಕ್ಷೇತ್ರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಸ್ಥಳಾಂತಕ್ಕಾಗಿ ಚಾಲ್ತಿಯಲ್ಲಿದ್ದ ಅರ್ಜಿ ನಮೂನೆ-8ಎ ಯನ್ನು ರದ್ದುಪಡಿಸಲಾಗಿದೆ. ನಮೂನೆ-8ಎ ರಲ್ಲಿದ್ದ ಸೌಲಭ್ಯವನ್ನು ಪರಿಷ್ಕರಿಸಿದ ನಮೂನೆ-8ರಲ್ಲಿ ಒದಗಿಸಲಾಗಿದೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2022 ರ ಸೆಪ್ಟೆಂಬರ್ 1 ರ ನಂತರದಲ್ಲಿ ಸೇರ್ಪಡೆ ಅಥವಾ ತಿದ್ದುಪಡಿ ಮಾಡುವ ಮತದಾರರ ಗುರುತಿನ ಚೀಟಿಯನ್ನು ಸ್ಪೀಡ್ ಪೋಸ್ಟ್ ಮುಖಾಂತರ ಮತದಾರರಿಗೆ ವಿತರಣೆ ಮಾಡಲಾಗುವುದು. ಮತದಾರರ ಪಟ್ಟಿಯ ಪರಿಷ್ಕರಣೆಯ ಸಲುವಾಗಿ 1950 ಮತದಾರರ ಸಹಾಯವಾಣಿಯನ್ನು ಪ್ರಾರಂಭಿಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳವರು ಈ ಸಹಾಯವಾಣಿಯ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಮತದಾರರ ಪಟ್ಟಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ

ಪಿರಿಯಾಪಟ್ಟಣ ತಾಲ್ಲೂಕು ಕಚೇರಿ ದೂ.ಸಂ.08223-274175
ಕೆ.ಆರ್.ನಗರ ತಾಲ್ಲೂಕು ಕಚೇರಿ ದೂ.ಸಂ. 08223-262371,262234
ಹುಣಸೂರು ತಾಲ್ಲೂಕು ಕಚೇರಿ ದೂ.ಸಂ. 08222-252040
ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ದೂ.ಸಂ.08228-255600
ನಂಜನಗೂಡು ತಾಲ್ಲೂಕು ಕಚೇರಿ ದೂ.ಸಂ.08221-223108
ಮೈಸೂರು ತಾಲ್ಲೂಕು ಕಚೇರಿ ದೂ.ಸಂ 0821-2414811, 2414812
ಮೈಸೂರು ಮಹಾನಗರ ಪಾಲಿಕೆ ದೂ.ಸಂ. 0821-2418800
ಟಿ.ನರಸೀಪುರ ತಾಲ್ಲೂಕು ಕಚೇರಿ ದೂ.ಸಂ.-08227-260210 ಸಂಪರ್ಕಿಸಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಬಿ.ಎಸ್.ಮಂಜುನಾಥ್, ಚುನಾವಣಾ ತಹಶೀಲ್ದಾರ್ ರಾಮಪ್ರಸಾದ್ , ಮೈಸೂರು ಜಿಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಇತರರು ಹಾಜರಿದ್ದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago