Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮೈಸೂರು ಸಾಂಸ್ಕೃತಿಕ ಉತ್ಸವಕ್ಕೆ ಕ್ಷಣಗಣನೆ ಆರಂಭ : ಮಾನಸಗಂಗೋತ್ರಿ ಆವರಣದಲ್ಲಿ ಸಕಲ ಸಿದ್ಧತೆ!

ಮೈಸೂರು : ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ ಗಂಗೋತ್ರಿಯ ಆವರಣದಲ್ಲಿ ಭರಪೂರ ಸಿದ್ಧತೆಗಳು ಈಗಾಗಲೇ ನಡೆದಿದೆ.

ಗಂಗೋತ್ರಿಯ ಬಯಲು ರಂಗಮಂದಿರ ಹಾಗೂ ಕ್ಲಾಕ್ ಟವರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಳಿಗೆಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ಹಂತದ ತಯಾರಿ ಭರ್ಜರಿಯಾಗಿ ಸಾಗಿದೆ.

ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿರುವ ಮೈಸೂರು ಫೆಸ್ಟ್ ಜ. 26 ರಿಂದ 28 ರವರೆಗೆ ಅದ್ಧೂರಿಯಾಗಿ ನಡೆಯಲಿದೆ.

ಜ.26 ರಂದು ಬೆಳಗ್ಗೆ 8 ರಿಂದ ಸಂಜೆ 8 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆಯಲ್ಲಿ ಚಿತ್ರಸಂತೆ ಕಾರ್ಯಕ್ರಮ ನಡೆಯಲಿದೆ.

ಜ. 27 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಗಣಿತ ವಿಭಾಗ ಮುಂಭಾಗದ ಆವರಣದಲ್ಲಿ ಚಿತ್ರಕಲಾ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ.

ಅಂದು ಸಂಜೆ ಜಾರ್ಜಿಯನ್ ನಿಯೋಗದವರು ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಗಳನ್ನು ನೀಡಲಿದ್ದಾರೆ.

ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ 09 ಗಂಟೆಯರವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದ ಸುತ್ತಲಿನ ಆವರಣದಲ್ಲಿ ಪ್ಲೀ ಮಾರುಕಟ್ಟೆ, ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಪಕ್ಕದ ಆಟದ ಮೈದಾನದಲ್ಲಿ ಮೈಸೂರು ಫುಡ್ ಫೆಸ್ಟ್, ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ ರಾತ್ರಿ 9.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆ ಮತ್ತು ಬಯಲು ರಂಗಮಂದಿರದಲ್ಲಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ನಡೆಯಲಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ