ಮೈಸೂರು : ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ ಗಂಗೋತ್ರಿಯ ಆವರಣದಲ್ಲಿ ಭರಪೂರ ಸಿದ್ಧತೆಗಳು ಈಗಾಗಲೇ ನಡೆದಿದೆ.
ಗಂಗೋತ್ರಿಯ ಬಯಲು ರಂಗಮಂದಿರ ಹಾಗೂ ಕ್ಲಾಕ್ ಟವರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಳಿಗೆಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ಹಂತದ ತಯಾರಿ ಭರ್ಜರಿಯಾಗಿ ಸಾಗಿದೆ.
ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿರುವ ಮೈಸೂರು ಫೆಸ್ಟ್ ಜ. 26 ರಿಂದ 28 ರವರೆಗೆ ಅದ್ಧೂರಿಯಾಗಿ ನಡೆಯಲಿದೆ.
ಜ.26 ರಂದು ಬೆಳಗ್ಗೆ 8 ರಿಂದ ಸಂಜೆ 8 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆಯಲ್ಲಿ ಚಿತ್ರಸಂತೆ ಕಾರ್ಯಕ್ರಮ ನಡೆಯಲಿದೆ.
ಜ. 27 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಗಣಿತ ವಿಭಾಗ ಮುಂಭಾಗದ ಆವರಣದಲ್ಲಿ ಚಿತ್ರಕಲಾ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ.
ಅಂದು ಸಂಜೆ ಜಾರ್ಜಿಯನ್ ನಿಯೋಗದವರು ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಗಳನ್ನು ನೀಡಲಿದ್ದಾರೆ.
ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ 09 ಗಂಟೆಯರವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದ ಸುತ್ತಲಿನ ಆವರಣದಲ್ಲಿ ಪ್ಲೀ ಮಾರುಕಟ್ಟೆ, ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಪಕ್ಕದ ಆಟದ ಮೈದಾನದಲ್ಲಿ ಮೈಸೂರು ಫುಡ್ ಫೆಸ್ಟ್, ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ ರಾತ್ರಿ 9.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆ ಮತ್ತು ಬಯಲು ರಂಗಮಂದಿರದಲ್ಲಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ನಡೆಯಲಿವೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…