ಮೈಸೂರು: ನಗರದ ಸಾತಗಳ್ಳಿ ಬಸ್ ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿ ನಾಪತ್ತೆಯಾಗಿದ್ದ ದಂಪತಿಯನ್ನು ಬಂಧಿಸಲಾಗಿದ್ದು, ಇಬ್ಬರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಸಾತಗಳ್ಳಿ ಬಸ್ ನಿಲ್ದಾಣದ ಮಳಿಗೆಗಳನ್ನು ಬಾಡಿಗೆ ಪಡೆದುಕೊಂಡು ಎರಡು ವರ್ಷಗಳಿಂದ ಬಾಡಿಗೆ ಕಟ್ಟದ ಹಿನ್ನೆಲೆ ಡಿ.10ರಂದು ಬೆಳಗ್ಗೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಾಡಿಗೆದಾರರನ್ನು ತೆರವು ಮಾಡಲು ಮುಂದಾಗಿದ್ದರು. ಈ ವೇಳೆ ಬಾಡಿಗೆ ಪಡೆದುಕೊಂಡಿದ್ದ ಕಾಂಗ್ರೆಸ್ ಮುಖಂಡ ಶಫೀಕ್ ಅಹಮ್ಮದ್ ಮತ್ತು ಅವರ ಪತ್ನಿ ಸೈಯದ್ ಮುನಿಬುನ್ನಿಸಾ ಸೇರಿದಂತೆ ಮೂವರು ಮಹಿಳೆಯರು ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಅಲ್ಲದೇ, ಸೈಯದ್ ಮುನಿಬುನ್ನಿಸಾ ಮಚ್ಚು ಹಿಡಿದು ಕೊಲೆ ಬೆದರಿಕೆ ಹಾಕಿ ನಾಪತ್ತೆಯಾಗಿದ್ದರು. ಈ ಸಂಬಂಧ ಕೆಎಸ್‌ಆರ್‌ಟಿಸಿ ವಿಭಾಗೀಯ ಸಾರಿಗೆ ಅಧಿಕಾರಿ ಮರಿಗೌಡ ಉದಯಗಿರಿ ಪೊಲೀಸರಿಗೆ ದೂರು ನೀಡಿದ್ದರು ಎಂದು ಹೇಳಿದರು.ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ಘಟನಾ ಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಖಾಕಿ ಸಮವಸ್ತ್ರ ಧರಿಸಿದ್ದರಿಂದ ಪೊಲೀಸರ ಸಮ್ಮುಖದಲ್ಲೇ ಕೊಲೆ ಬೆದರಿಕೆ ನಡೆಯುತ್ತಿದೆ ಎಂದು ಸಾರ್ವಜನಿಕರು ವಿಡಿಯೋ ತುಣುಕಗಳನ್ನು ನೋಡಿ ಭಾವಿಸಿದ್ದರು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…