ಜಿಲ್ಲೆಗಳು

ಸಾರಿಗೆ ಅಧಿಕಾರಿಗಳಿಗೆ ಮಚ್ಚು ತೋರಿಸಿ ಹೆದರಿಸಿದ ದಂಪತಿ ಬಂಧನ

ಮೈಸೂರು: ನಗರದ ಸಾತಗಳ್ಳಿ ಬಸ್ ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿ ನಾಪತ್ತೆಯಾಗಿದ್ದ ದಂಪತಿಯನ್ನು ಬಂಧಿಸಲಾಗಿದ್ದು, ಇಬ್ಬರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಸಾತಗಳ್ಳಿ ಬಸ್ ನಿಲ್ದಾಣದ ಮಳಿಗೆಗಳನ್ನು ಬಾಡಿಗೆ ಪಡೆದುಕೊಂಡು ಎರಡು ವರ್ಷಗಳಿಂದ ಬಾಡಿಗೆ ಕಟ್ಟದ ಹಿನ್ನೆಲೆ ಡಿ.10ರಂದು ಬೆಳಗ್ಗೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಾಡಿಗೆದಾರರನ್ನು ತೆರವು ಮಾಡಲು ಮುಂದಾಗಿದ್ದರು. ಈ ವೇಳೆ ಬಾಡಿಗೆ ಪಡೆದುಕೊಂಡಿದ್ದ ಕಾಂಗ್ರೆಸ್ ಮುಖಂಡ ಶಫೀಕ್ ಅಹಮ್ಮದ್ ಮತ್ತು ಅವರ ಪತ್ನಿ ಸೈಯದ್ ಮುನಿಬುನ್ನಿಸಾ ಸೇರಿದಂತೆ ಮೂವರು ಮಹಿಳೆಯರು ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಅಲ್ಲದೇ, ಸೈಯದ್ ಮುನಿಬುನ್ನಿಸಾ ಮಚ್ಚು ಹಿಡಿದು ಕೊಲೆ ಬೆದರಿಕೆ ಹಾಕಿ ನಾಪತ್ತೆಯಾಗಿದ್ದರು. ಈ ಸಂಬಂಧ ಕೆಎಸ್‌ಆರ್‌ಟಿಸಿ ವಿಭಾಗೀಯ ಸಾರಿಗೆ ಅಧಿಕಾರಿ ಮರಿಗೌಡ ಉದಯಗಿರಿ ಪೊಲೀಸರಿಗೆ ದೂರು ನೀಡಿದ್ದರು ಎಂದು ಹೇಳಿದರು.ನಗರ ಪೊಲೀಸ್ ಕಮಿಷನರ್ ರಮೇಶ್​ ಬಾನೋತ್​ಘಟನಾ ಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಖಾಕಿ ಸಮವಸ್ತ್ರ ಧರಿಸಿದ್ದರಿಂದ ಪೊಲೀಸರ ಸಮ್ಮುಖದಲ್ಲೇ ಕೊಲೆ ಬೆದರಿಕೆ ನಡೆಯುತ್ತಿದೆ ಎಂದು ಸಾರ್ವಜನಿಕರು ವಿಡಿಯೋ ತುಣುಕಗಳನ್ನು ನೋಡಿ ಭಾವಿಸಿದ್ದರು.

andolanait

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

2 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

2 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

2 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

2 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

3 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

3 hours ago